ADVERTISEMENT

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದತಿಗೆ ಒತ್ತಾಯಿಸಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 15:47 IST
Last Updated 1 ಡಿಸೆಂಬರ್ 2020, 15:47 IST
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದತಿಗೆ ಆಗ್ರಹಿಸಿ ಬೀದರ್‍ನಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯ ಸದಸ್ಯರು ಅಂಬೇಡ್ಕರ್ ವೃತ್ತದಲ್ಲಿ ಘೋಷಣೆಗಳನ್ನು ಕೂಗಿದರು
ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದತಿಗೆ ಆಗ್ರಹಿಸಿ ಬೀದರ್‍ನಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯ ಸದಸ್ಯರು ಅಂಬೇಡ್ಕರ್ ವೃತ್ತದಲ್ಲಿ ಘೋಷಣೆಗಳನ್ನು ಕೂಗಿದರು   

ಬೀದರ್: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಪ್ರಾಧಿಕಾರವನ್ನು ರದ್ದುಪಡಿಸದಿದ್ದರೆ ಬರುವ ದಿನಗಳಲ್ಲಿ ವಿಧಾನಸಭೆ ಎದುರು ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಸಮಿತಿ ರಾಜ್ಯ ಅಂಗವಿಕಲ ವಿಭಾಗದ ಅಧ್ಯಕ್ಷೆ ಮಂಗಲಾ ಮರಕಲೆ, ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಭಾವಿದೊಡ್ಡಿ, ಜಿಲ್ಲಾ ಕೂಲಿ ಕಾರ್ಮಿಕ ವಿಭಾಗದ ಅಧ್ಯಕ್ಷ ವೆಂಕಟ ಒಡೆಯರ್, ವಿಶಾಲ ದೊಡ್ಡಿ, ಸಂತೋಷ ಆಲೂರೆ, ಜಗದೇವಿ ಕಾವಳೆ, ಶರಣಪ್ಪ ಯದಲಾಪುರೆ, ಸಂಗೀತಾ ಸ್ವಾಮಿ, ಗೋದಾವರಿ ನೌಬಾದ್, ಇಸಾಕ್ ಹಾಲಹಳ್ಳಿ, ಪಪ್ಪುರಾಜ ಮೇತ್ರೆ, ರಾಜಕುಮಾರ ಭಾವಿದೊಡ್ಡಿ ಮೊದಲಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.