ADVERTISEMENT

ಬೀದರ್‌ | ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 279ಕ್ಕೆ

ಒಂದೇ ದಿನ 9 ಮಂದಿಗೆ ವೈರಾಣು

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 15:09 IST
Last Updated 9 ಜೂನ್ 2020, 15:09 IST
ಕೊರೊನಾ ವೈರಸ್‌
ಕೊರೊನಾ ವೈರಸ್‌   

ಬೀದರ್‌: ಜಿಲ್ಲೆಯಲ್ಲಿ ಮಂಗಳವಾರ ಮೂವರು ಮಹಿಳೆಯರು ಹಾಗೂ ಆರು ಪುರುಷರು ಸೇರಿ ಒಟ್ಟು ಒಂಬತ್ತು ಜನರಿಗೆ ಕೋವಿಡ್‌ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ವೈರಾಣು ಪೀಡಿತರ ಸಂಖ್ಯೆ 279ಕ್ಕೆ ಏರಿದೆ.

ಔರಾದ್–ಬೀದರ್ ರಸ್ತೆಯಲ್ಲಿ ಹೋಟೆಲ್ ನಡೆಸುತ್ತಿದ್ದ 50 ವರ್ಷದ ವ್ಯಕ್ತಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ. ಜ್ವರ, ಕೆಮ್ಮಿನಿಂದ ನರಳುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಬೀದರ್ ಆಸ್ಪತ್ರೆಗೆ ಕಳುಹಿಸಿ ಗಂಟಲು ದ್ರವದ ಮಾದರಿ ಪರೀಕ್ಷೆ ನಡೆಸಿದಾಗ ವರದಿ ಪಾಸಿಟಿವ್ ಬಂದಿದೆ. ವ್ಯಕ್ತಿ ವಾಸವಾಗಿರುವ ಲೀಡ್ಕರ್ ಕಾಲೊನಿ ಪ್ರವೇಶ ನಿರ್ಬಂಧಿಸಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

ಏಕಂಬಾದ 56 ವರ್ಷದ ತಾಯಿ ಹಾಗೂ 35 ವರ್ಷದ ಮಗನಿಗೆ ಕೋವಿಡ್ 19 ಸೋಂಕು ತಗುಲಿದೆ. ಇವರು ಮೇ 31ರಂದು ಮುಂಬೈನಿಂದ ಬಂದು ಕ್ವಾರಂಟೈನ್‌ ಕೇಂದ್ರದಲ್ಲಿ ಇದ್ದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಇವರ ಮೇಲೆ ನಿಗಾ ಇಟ್ಟಿದ್ದಾರೆ.

ADVERTISEMENT

ಚಿಟಗುಪ್ಪ ತಾಲ್ಲೂಕಿನ ಹಿಪ್ಪರಗಾ ಗ್ರಾಮದ 30 ವರ್ಷದ ಮಹಿಳೆಯೊಬ್ಬರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲಾ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿರುವ ಒಬ್ಬರೂ ಮಂಗಳವಾರ 42 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ 3634 ಜನರ ವೈದ್ಯಕೀಯ ವರದಿ ಬರಬೇಕಿದೆ.

ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಐವರಿಗೆ ಜ್ವರ ಇರುವುದು ಕಂಡು ಬಂದಿದೆ. 2202 ಜನರು ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.