ADVERTISEMENT

ಸೇವೆ ಕಾಯಂ ಮಾಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 16:27 IST
Last Updated 13 ಜುಲೈ 2021, 16:27 IST
ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಬೀದರ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿಪತ್ರವನ್ನು ಸಲ್ಲಿಸಿದರು
ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಬೀದರ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿಪತ್ರವನ್ನು ಸಲ್ಲಿಸಿದರು   

ಬೀದರ್: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸ ಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಆಗ್ರಹಿಸಿದೆ.

ಬೇಡಿಕೆ ದಿನದ ಅಂಗವಾಗಿ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಪತ್ರವನ್ನು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ನೀಡಬೇಕು ಎನ್ನುವುದು ಸೇರಿದಂತೆ 45ನೇ ಕಾರ್ಮಿಕ ಸಮ್ಮೇಳನದ ಎಲ್ಲ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರಂತರ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಂಘದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷೆ ಶಕುಂತಲಾ ಸೋನಿ, ಕಾರ್ಯದರ್ಶಿ ಸುಜಾತಾ, ಖಜಾಂಚಿ ಶಾಂತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.