ಔರಾದ್: ತಾಲ್ಲೂಕಿನ ನಾರಾಯಣಪೂರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಳ್ಳರು ಎರಡು ಮನೆ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಲಕ್ಷ್ಮಿ ಎಂಬುವವರ ಮನೆ ಬೀಗ ಮುರಿಯಲಾಗಿದೆ. ಅವರು ಬೆಂಗಳೂರಿನಲ್ಲಿ ಇದ್ದು ಬಂದ ನಂತರವೇ ಏನು ಕಳವು ಆಗಿದೆ ಎಂದು ಗೊತ್ತಾಗಲಿದೆ. ಇನ್ನೊಂದು ಮನೆಯಲ್ಲಿನ ಮೊಬೈಲ್ ಕಳ್ಳತನವಾಗಿದೆ ಎಂದು ಮನೆ ಮಾಲೀಕರು ಹೇಳಿದ್ದಾರೆ. ಈ ಕುರಿತು ಪರಿಶೀಲನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.