ADVERTISEMENT

ಕೋವಿಡ್ ಸೋಂಕಿಗೆ ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 4:54 IST
Last Updated 23 ಏಪ್ರಿಲ್ 2021, 4:54 IST

ಹುಮನಾಬಾದ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಕೋವಿಡ್– 19 ಸೋಂಕಿಗೆ ಮೂವರು ಮೃತಪಟ್ಟಿಟ್ಟಿದ್ದಾರೆ.

‘ಆಸ್ಪತ್ರೆಯಲ್ಲಿ ಓರ್ವ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಅವರನ್ನು ಕೋವಿಡ್ ಕೇರ್‌ಗೆ ಕರೆದುಕೊಂಡು ಹೋಗಿ ಚಿಕ್ಸಿತೆ ಪ್ರಾರಂಭಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ಸದ್ಯ ಆಸ್ಪತ್ರೆಯಲ್ಲಿ 41 ಸೋಂಕಿತರಿಗೆ ಚಿಕ್ಸಿತೆ ನೀಡಲಾಗುತ್ತಿದೆ. 22 ರೋಗಿಗಳಿಗೆ ಆಕ್ಸಿಜನ್ ನೀಡಲಾಗಿದೆ. ಆಸ್ಪತ್ರೆಯ 12 ಸಿಬ್ಬಂದಿಗೂ ಸೋಂಕು ಧೃಡಪಟ್ಟಿದೆ’ ಎಂದು ಆಸ್ಪತ್ರೆಯ ಮುಖ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ತಿಳಿಸಿದ್ದಾರೆ.

‘ತಾಲ್ಲೂಕಿನಾದ್ಯಂತ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ರೋಗದ ಲಕ್ಷಣಗಳು ಕಂಡುಬಂದರೆ ಕೋವಿಡ್ ಪರೀಕ್ಷೆಗೆ ಒಳಪಡಬೇಕು. ಇದರಿಂದ ಸಮುದಾಯಕ್ಕೆ ಸೋಂಕು ಹರಡುವುದನ್ನು ತಡೆಗಟ್ಟಬಹುದು’ ಎಂದು ತಹಶೀಲ್ದಾರ್ ಜೈಶ್ರೀ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.