
ಪ್ರಜಾವಾಣಿ ವಾರ್ತೆಬೀದರ್: ಜಿಲ್ಲೆಯ ಬೀದರ್, ಹುಮನಾಬಾದ್, ಹುಲಸೂರ, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುರುವಾರ ಗುಡುಗು ಸಹಿತ ಜಿಟಿಜಿಟಿ ಮಳೆಯಾಗಿದೆ.
ಬುಧವಾರ ತಡರಾತ್ರಿ ಕೂಡ ಮಳೆಯಾಗಿತ್ತು. ಗುರುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಸಂಜೆ 4ಗಂಟೆ ಸುಮಾರಿಗೆ ಆರಂಭಗೊಂಡ ಜಿಟಿಜಿಟಿ ಮಳೆ ಸಂಜೆ 6.30ರ ವರೆಗೆ ಸುರಿದಿದೆ. ಮಳೆಗೆ ತಾಪಮಾನದಲ್ಲಿ ಭಾರಿ ಇಳಿಕೆಯಾಗಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಕೆಂಡದ ಬಿಸಿಲಿನಿಂದ ಬಸವಳಿದವರು ಮಳೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.