ಕಮಲನಗರ: ‘ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯೇ ಶಿಕ್ಷಣದ ಮುಖ್ಯ ಆಶಯವಾಗಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ’ ಎಂದು ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಆನಂದ ಎಸ್.ಎಚ್ ಹೇಳಿದರು.
ತಾಲ್ಲೂಕಿನ ತೋರಣಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಸಾಮಾಜಿಕ ಪರಿಶೋಧನೆ ಪ್ರಯುಕ್ತ ನಡೆದ ಸಭೆಯಲ್ಲಿ ಮಾತನಾಡಿದರು.
‘ಮಕ್ಕಳಿಗೆ ಕಲಿಕೆ ಎನ್ನುವುದು ಆನಂದವಾಗಿರಬೇಕೆ ವಿನ: ಒತ್ತಡವಾಗಿರಬಾರದು. ಮಕ್ಕಳ ಆಸಕ್ತಿ ಗಮನಿಸಿ ಶೈಕ್ಷಣಿಕ ಚಟುವಟಿಕೆ ಹಮ್ಮಿಕೊಳ್ಳಬೇಕು. ಸರ್ವತೋಮುಖ ಅಭಿವೃದ್ಧಿಗಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯ. ಪ್ರತಿ ಶಾಲೆಯಲ್ಲಿಯೂ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಸಮನಾಗಿ ಆಯೋಜನೆ ಮಾಡಬೇಕು. ಇದರಿಂದ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ಹೊರಬರಲು ಸಾಧ್ಯವಾಗುತ್ತದೆ’ ಎಂದರು.
ದೇವಿದಾಸ ಭೋಸ್ಲೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಶಿಕ್ಷಕರಾದ ಬಾಪುರಾವ ಮೊತಿರಾಮ ಬಿರಾದಾರ, ಶಿವರಾಜ ಪಾಟೀಲ, ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಉಮೇಶ ಹೊನ್ನಳ್ಳೆ, ಗೋವಿಂದ ಪೋಟಿವಾಲೆ, ಸಂತೋಷ ದಿಂಡೆ, ಕವಿತಾ ನಾಗನಾಥ, ಯೋಗೇಶ ಪಾಟೀಲ, ಶ್ರೀದೇವಿ ಬಿರಾದಾರ, ಸುನೀಲ್ ವಿಠ್ಠಲ ಹಾಗೂ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಪಾಲಕರು ಹಾಗೂ ಮಕ್ಕಳು ಇದ್ದರು.
ಸಂಜಯಕುಮಾರ ಮದನಕರ ನಿರೂಪಿಸಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.