ADVERTISEMENT

ಮಾಸ್ಟರ್‌ ಟ್ರೇನರ್‌ಗಳಿಗೆ ತರಬೇತಿ

ಹೊಸ ವಿಧಾನದ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 15:13 IST
Last Updated 7 ಡಿಸೆಂಬರ್ 2020, 15:13 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕಿನ ಮಾಸ್ಟರ್‌ ಟ್ರೇನರ್‌ಗಳ ತರಬೇತಿ ಕಾರ್ಯಕ್ರಮದಲ್ಲಿ ಹೈದರಾಬಾದ್‌ನ ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನ (ಇಸಿಐಎಲ್) ಎಂಜಿನಿಯರ್‌ಗಳಾದ ವಿಜಯೇಂದ್ರ ಹಾಗೂ ಮುರಳೀಧರ್ ತರಬೇತಿ ನೀಡಿದರು. ಜಿಲ್ಲಾ ಮಾಸ್ಟರ್‌ ಟ್ರೇನರ್ ಡಾ.ಗೌತಮ ಅರಳಿ ಇದ್ದಾರೆ

ಬೀದರ್‌: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗಾಗಿಯೇ ಸಿದ್ಧ ಪಡಿಸಲಾದ ಹೊಸ ವಿಧಾನದ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ ಕುರಿತು ಜಿಲ್ಲೆಯ 53 ಮಾಸ್ಟರ್‌ ಟ್ರೇನರ್‌ಗಳಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತರಬೇತಿ ನೀಡಲಾಯಿತು.

ತಾಲ್ಲೂಕು ಮಟ್ಟದಲ್ಲಿ ಚುನಾವಣಾ ಅಧಿಕಾರಿಗಳಿಗೆ ತರಬೇತಿ ನೀಡಲಿರುವ ಮಾಸ್ಟರ್‌ ಟ್ರೇನರ್ಸ್‌ ಹಲವು ಪ್ರಶ್ನೆಗಳನ್ನು ಕೇಳುವ ತಮ್ಮ ಗೊಂದಲಗಳನ್ನು ನಿವಾರಿಸಿಕೊಂಡರು. ಇಬ್ಬರು, ಮೂವರು, ನಾಲ್ವರು ಹಾಗೂ ಐವರು ಸದಸ್ಯರು ಒಂದೇ ವಾರ್ಡ್‌ನಿಂದ ಸರ್ಧಿಸಿದರೆ ಮತಯಂತ್ರಗಳನ್ನು ಹೇಗೆ ಸಿದ್ಧಪಡಿಸಿಕೊಳ್ಳಬೇಕು. ಮತಯಂತ್ರವನ್ನು ಹೇಗೆ ಜೋಡಿಕೊಳ್ಳಬೇಕು ಎನ್ನುವ ಕುರಿತು ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್, ಮಾತನಾಡಿ, ‘ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ
ಮಾಸ್ಟರ್ ಟ್ರೇನರ್‌ಗಳು ಮೊದಲು ಪರಿಪೂರ್ಣ ತರಬೇತಿ ಪಡೆದು ಇತರರಿಗೆ ತಿಳಿಸಬೇಕು’ ಎಂದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹಾಗೂ ಜಿಲ್ಲಾ ಮಾಸ್ಟರ್‌ ಟ್ರೇನರ್ ಡಾ.ಗೌತಮ ಅರಳಿ ಅವರು ತಾಲ್ಲೂಕು ಮಟ್ಟದ ಮಾಸ್ಟರ್‌ ಟ್ರೇನರ್‌ಗಳಿಗೆ ಮಾರ್ಗದರ್ಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.