ADVERTISEMENT

ಮತ ಎಣಿಕೆ ಸಿಬ್ಬಂದಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 16 ಮೇ 2019, 15:04 IST
Last Updated 16 ಮೇ 2019, 15:04 IST
ಬೀದರ್‌ನ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ನಿಯೋಜನೆಗೊಂಡ ಸಿಬ್ಬಂದಿಯ ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿದರು
ಬೀದರ್‌ನ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ನಿಯೋಜನೆಗೊಂಡ ಸಿಬ್ಬಂದಿಯ ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿದರು   

ಬೀದರ್: ಲೋಕಸಭೆ ಚುನಾವಣೆಯ ಮತ ಏಣಿಕೆ ಕರ್ತವ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಗೆ ಗುರುವಾರ ನಗರದ ಜಿಲ್ಲಾ ರಂಗಮಂದಿರದಲ್ಲಿ ತರಬೇತಿ ನೀಡಲಾಯಿತು.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಮಾತನಾಡಿ,‘ಚುನಾವಣೆ ಕರ್ತವ್ಯವನ್ನು ಸುಸೂತ್ರವಾಗಿ ನಿಭಾಯಿಸಿದಂತೆ, ಮೇ 23 ರಂದು ನಡೆಯಲಿರುವ ಮತ ಎಣಿಕೆ ಕೆಲಸವನ್ನೂ ಅಚ್ಚುಕಟ್ಟಾಗಿ ಮಾಡಬೇಕು. ಅಂದು ಸಿಬ್ಬಂದಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ತಮ್ಮಲ್ಲಿರುವ ಎಲ್ಲ ರೀತಿಯ ಗೊಂದಲಗಳನ್ನು ಮುಂಚಿತವಾಗಿಯೇ ನಿವಾರಿಸಿಕೊಂಡು ಮಾನಸಿಕವಾಗಿ ಸಿದ್ಧರಾಗಬೇಕು’ ಎಂದು ತಿಳಿಸಿದರು.

‘ಕರ್ತವ್ಯದ ವೇಳೆ ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ಮಾಡಿಕೊಡದೇ ತಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕು. ಮತ ಏಣಿಕೆ ಸ್ಥಳದಲ್ಲಿ ಹಾಜರಿರುವ ರಾಜಕೀಯ ಪಕ್ಷಗಳ ಏಜೆಂಟರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಮತ ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಡೆಸಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ,‘ಮತ ಏಣಿಕೆ ಸಿಬ್ಬಂದಿಯ ಕರ್ತವ್ಯಗಳ ಮಾಹಿತಿ ನೀಡಿದರು.

ಬೀದರ್ ಹಾಗೂ ಬಸವಕಲ್ಯಾಣ ಉಪ ವಿಭಾಗಾಧಿಕಾರಿಗಳಾದ ಡಾ.ಶಂಕರ ವಣಕ್ಯಾಳ, ಗ್ಯಾನೇಂದ್ರಕುಮಾರ ಗಂಗವಾರ, ಚುನಾವಣಾಧಿಕಾರಿಗಳು, ಮತ ಎಣಿಕೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.