ADVERTISEMENT

ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಿ: ಅಮೃತರಾವ್ ಚಿಮಕೋಡೆ

ಜಾಗೃತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 13:22 IST
Last Updated 31 ಮಾರ್ಚ್ 2023, 13:22 IST
ಬೀದರ್‌ನ ಜಾಗೃತಿ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಉದ್ಘಾಟಿಸಿದರು
ಬೀದರ್‌ನ ಜಾಗೃತಿ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಉದ್ಘಾಟಿಸಿದರು   

ಬೀದರ್: ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು ಎಂದು ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಹೇಳಿದರು.

ಇಲ್ಲಿಯ ಚಿದ್ರಿಯ ಬೊಮ್ಮಗೊಂಡೇಶ್ವರ ವೃತ್ತ ರಸ್ತೆಯಲ್ಲಿ ಇರುವ ಜಾಗೃತಿ ಪಬ್ಲಿಕ್ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದಲೇ ಜೀವನದಲ್ಲಿ ಉನ್ನತಿ ಸಾಧ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ವ್ಯಾಸಂಗ ಮಾಡಬೇಕು. ಪಾಲಕರು, ಶಿಕ್ಷಕರು ಹಾಗೂ ಕಲಿತ ಶಾಲೆಗೆ ಕೀರ್ತಿ ತರಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ತುಕಾರಾಮ ಚಿಮಕೋಡ್ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಕರಾಟೆ, ಯೋಗ ತರಬೇತಿ ನೀಡಲಾಗುತ್ತಿದೆ. ಸದ್ಗುಗಳನ್ನೂ ಕಲಿಸಲಾಗುತ್ತಿದೆ ಎಂದು ಹೇಳಿದರು.

ದಲಿತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಜಂಜೀರೆ, ಬಗದಲ್‍ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ, ಜಾತ್ಯತೀತ ಜನತಾ ದಳದ ಮುಖಂಡ ದೇವೇಂದ್ರ ಆರ್. ಸೋನಿ, ಕನ್ನಡ ಸಾಹಿತ್ಯ ಪರಿಷತ್ತಿನ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ, ಶಿಕ್ಷಣ ಇಲಾಖೆಯ ಮಂಜುನಾಥ, ಕಸಾಪದ ಸಂಜೀವ್ ಅಲ್ಲೂರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.