ಬಿರುಗಾಳಿ ಮಳೆಗೆ ನೆಲಕ್ಕುರುಳಿದ ಮರ
ಪ್ರಜಾವಾಣಿ ಚಿತ್ರ: ಲೋಕೇಶ ವಿ. ಬಿರಾದಾರ
ಬೀದರ್: ಜಿಲ್ಲೆಯಾದ್ಯಂತ ಮಂಗಳವಾರ ಮಳೆಯಾಗಿದೆ. ರಾತ್ರಿ ಬಿರುಗಾಳಿ ಸಹಿತ ಸುರಿದ ಮಳೆಗೆ ನಗರದ ಬೊಮ್ಮಗೊಂಡೇಶ್ವರ ವೃತ್ತದಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ನೆಲಕ್ಕುರುಳಿದ್ದರಿಂದ ವಾಹನ ಸಂಚಾರಕ್ಕೆ ತೊಡಕಾಯಿತು.
ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಮರದ ಕಾಂಡಗಳನ್ನು ತೆರವುಗೊಳಿಸಲು ಹರಸಾಹಸ ನಡೆಸಿದರು.
ಸಂಜೆ ಬಿರುಸಿನಿಂದ ಸುರಿದ ಮಳೆ ಬಿಡುವು ಕೊಟ್ಟು ಪುನಃ ರಾತ್ರಿ ಆರಂಭಗೊಂಡಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು.
ಜಿಲ್ಲೆಯ ಬೀದರ್, ಬಸವಕಲ್ಯಾಣ, ಹುಮನಾಬಾದ್, ಭಾಲ್ಕಿ, ಔರಾದ್, ಚಿಟಗುಪ್ಪ, ಹುಲಸೂರ, ಕಮಲನಗರದಲ್ಲಿ ಉತ್ತಮ ಮಳೆಯಾಗಿದೆ.
ಪ್ರಜಾವಾಣಿ ಚಿತ್ರ: ಲೋಕೇಶ ವಿ. ಬಿರಾದಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.