ADVERTISEMENT

ಬೀದರ್ | ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಿ

ಕಮಲನಗರ : ಒಂದು ದಿನದ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 14:04 IST
Last Updated 24 ಡಿಸೆಂಬರ್ 2019, 14:04 IST
ಕಮಲನಗರದಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಉದ್ಘಾಟಿಸಿ ಮಾತನಾಡಿದರು
ಕಮಲನಗರದಲ್ಲಿ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಉದ್ಘಾಟಿಸಿ ಮಾತನಾಡಿದರು   

ಕಮಲನಗರ : ಶಿಕ್ಷಕರು ಹಾಗೂ ಪಾಲಕರು ಮಕ್ಕಳ ಮನಸ್ಸಿನ ಮೇಲೆ ಒತ್ತಡ ಹೇರುವ ಬದಲು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಉತ್ತಮ ಗೊಳಿಸಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಹೇಳಿದರು.

ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ.ಮಂಜುನಾಥ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಪರೀಕ್ಷೆಯ ಭಯ ಹೋಗಲಾಡಿಸಿ ಎಂದರು.

ADVERTISEMENT

ಆಡಳಿತ ಅಧಿಕಾರಿ ಚನ್ನಬಸವ ಘಾಳೆ, ಕಮಲನಗರ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕಾಂತ ಹಣಮಶೆಟ್ಟೆ, ಸಂಪನ್ಮೂಲ ವ್ಯಕ್ತಿ ಸೈಯದ್ ಫರ್ಕುನ್ ಪಾಶಾ, ಭೀಮಪ್ಪ, ಶಶಿಕಾಂತ ಜೋಶಿ, ಸಂಪೂರ್ಣಾನಂದ, ಮನೋಹರ ಬಿರಾದಾರ ಮಾತನಾಡಿದರು.

ಶಿವಕುಮಾರ ಧರಣೆ, ರಾಜಕುಮಾರ ರಾಂಪುರೆ, ಆರ್.ವಿ.ಸೂರ್ಯವಂಶಿ, ಅಜಯ ಪಾಂಚಾಳ, ಪರಮೇಶ ಪಟವಾರಿ, ರಾಜಕುಮಾರ ವಡಗಾಂವೆ, ಮಹಾದೇವ ಚಾಂಗುಣೆ, ಸಂಜೀವಕುಮಾರ ಡೊಂಗ್ರೆ, ವಿಶಾಲ ಸೊಲ್ಲಪುರೆ, ಬಂಟಿ ರಾಂಪುರೆ ಇದ್ದರು.

ಚಂದ್ರಕಾಂತ ಗಳಗೆ ನಿರೂಪಿಸಿದರು. ಮೇಘರಾಜ ಪವಾರ ಸ್ವಾಗತಿಸಿದರು.ವಿಜಯಕುಮಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.