ADVERTISEMENT

ಬಿಸಿಲು: ಉದ್ಯೋಗ ಖಾತ್ರಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 9 ಮೇ 2024, 16:06 IST
Last Updated 9 ಮೇ 2024, 16:06 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬಸವಕಲ್ಯಾಣ: ತಾಲ್ಲೂಕಿನ ಕಿಟ್ಟಾ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದ ಮಲ್ಲಪ್ಪ ತೊಗರಖೇಡೆ (58) ಗುರುವಾರ ಮೃತಪಟ್ಟಿದ್ದಾರೆ.

ಗ್ರಾಮದ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರಜ್ಞೆತಪ್ಪಿ ಬಿದ್ದಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಸ್ಪಂದಿಸಲಿಲ್ಲ.

ADVERTISEMENT

ತಾಲ್ಲೂಕು ಪಂಚಾಯಿತಿ ಇಒ ರಮೇಶ ಸುಲ್ಫೆ ಮತ್ತು ಸಹಾಯಕ ನಿರ್ದೇಶಕ ಸಂತೋಷಕುಮಾರ ಚವಾಣ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.