ADVERTISEMENT

ಬೀದರ್ | ನಾಳೆ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 16:12 IST
Last Updated 6 ಜನವರಿ 2022, 16:12 IST
ರಾಮಚಂದ್ರನ್ ಆರ್
ರಾಮಚಂದ್ರನ್ ಆರ್   

ಬೀದರ್: ಕೋವಿಡ್ ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಜಿಲ್ಲೆಯಲ್ಲಿ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ.

ಶನಿವಾರ ಸರ್ಕಾರಿ ಕಚೇರಿಗಳಿಗೆ ರಜೆ ಇದೆ. ಸರ್ಕಾರಿ, ಖಾಸಗಿ ಶಾಲೆಗಳು, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳ ಆಡಳಿತ ಮಂಡಳಿಗಳು ಈಗಾಗಲೇ ರಜೆ ಘೋಷಣೆ ಮಾಡಿವೆ. ಸರ್ಕಾರಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ದೇವಸ್ಥಾನಗಳಲ್ಲಿ ಸಾರ್ವಜನಿಕರ ದರ್ಶನಕ್ಕೆ ನಿಬರ್ಂಧ ಹೇರಲಾಗಿದೆ. ದೇಗುಲದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂಗಡಿ ತೆರೆಯುವುದನ್ನು ಕೂಡ ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲೇ ಉಳಿದು ಕೋವಿಡ್ ನಿಯಂತ್ರಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ವಾರಾಂತ್ಯ ಕರ್ಫ್ಯೂ:ಜನವರಿ 7 ರಂದು ರಾತ್ರಿ 8 ಗಂಟೆಯಿಂದ ಜ. 17 ಸೋಮವಾರ ಬೆಳಗಿನ 5 ಗಂಟೆಯ ವರೆಗೆ ವಾರಾಂತ್ಯ ಕರ್ಫ್ಯೂ ಜಾರಿ ಇರಲಿದೆ. ಈ ದಿನಗಳನ್ನು ಹೊರತು ಪಡಿಸಿ ಉಳಿದ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.