ADVERTISEMENT

ಲಸಿಕೆ ಪಡೆದ ಸಚಿವ, ಪತ್ರಕರ್ತರು

ಪ್ರತಿಯೊಬ್ಬರೂ ಲಸಿಕೆ ಪಡೆಯಲು ಸಲಹೆ

​ಪ್ರಜಾವಾಣಿ ವಾರ್ತೆ
Published 12 ಮೇ 2021, 5:38 IST
Last Updated 12 ಮೇ 2021, 5:38 IST
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಬೀದರ್‌ನ ಬ್ರಿಮ್ಸ್‌ನಲ್ಲಿ ಮಂಗಳವಾರ ಕೋವಿಡ್ ಲಸಿಕೆ ಪಡೆದರು
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಬೀದರ್‌ನ ಬ್ರಿಮ್ಸ್‌ನಲ್ಲಿ ಮಂಗಳವಾರ ಕೋವಿಡ್ ಲಸಿಕೆ ಪಡೆದರು   

ಬೀದರ್: ಕೋವಿಡ್ ಫ್ರಂಟ್‍ಲೈನ್ ವಾರಿಯರ್ಸ್ ಎಂದು ಪರಿಗಣಿಸಲಾದ ಪತ್ರಕರ್ತರು ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯಲ್ಲಿ ಮಂಗಳವಾರ ಕೋವಿಡ್ ಲಸಿಕೆ ಪಡೆದರು.

ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರೂ ಲಸಿಕೆ ಪಡೆದು ಪತ್ರಕರ್ತರಲ್ಲಿ ಸ್ಫೂರ್ತಿ ತುಂಬಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಕರಂಜಿ, ಬ್ರಿಮ್ಸ್ ನಿದೇರ್ಶಕ ಡಾ. ಶಿವಕುಮಾರ, ಡಾ. ಮಹೇಶ ಬಿರಾದಾರ, ಡಾ. ರಾಜಶೇಖರ ಪಾಟೀಲ, ಡಾ. ಮಹೇಶ ತೊಂಡಾರೆ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.