ADVERTISEMENT

ನಾಳೆ ವಾಲ್ಮೀಕಿ ಜಯಂತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 15:49 IST
Last Updated 7 ಅಕ್ಟೋಬರ್ 2022, 15:49 IST

ಬೀದರ್: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಕ್ಟೋಬರ್ 9 ರಂದು ಬೆಳಿಗ್ಗೆ 11ಕ್ಕೆ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸುವರು. ಕೇಂದ್ರದ ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಘನ ಉಪಸ್ಥಿತಿ ವಹಿಸುವರು. ಶಾಸಕ ರಹೀಂಖಾನ್ ಅಧ್ಯಕ್ಷತೆ ವಹಿಸುವರು.

ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಪಾಳ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಹಾಲಹಳ್ಳಿ ಸ್ನಾತಕೋತ್ತರ ಕೇಂದ್ರದ ಡಾ. ರಾಮಚಂದ್ರ ಗಣಾಪುರ ಅವರು ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಹೇಳಿಕೆ ತಿಳಿಸಿದೆ.

ವಿಚಾರ ಗೋಷ್ಠಿ ನಾಳೆ

ADVERTISEMENT

ಬೀದರ್: ಜಮಾ ಅತೆ ಇಸ್ಲಾಮಿ ಹಿಂದ್ ಸಂಘಟನೆ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಅಕ್ಟೋಬರ್ 9 ರಂದು ಸಂಜೆ 6.30ಕ್ಕೆ 'ಪ್ರವಾದಿ ಮಹಮ್ಮದರನ್ನು ಅರಿಯೋಣ' ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಶಾಸಕ ರಹೀಂಖಾನ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ಸಂಘ ಸಂಸ್ಥೆಗಳ ಪ್ರಮುಖರು, ಸಾಹಿತಿಗಳು, ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಜಮಾ ಅತೆ ಇಸ್ಲಾಮಿ ಹಿಂದ್‍ನ ಕರ್ನಾಟಕ ಘಟಕದ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ಕುಂಇ ಅಧ್ಯಕ್ಷತೆ ವಹಿಸುವರು ಎಂದು ಸಂಘಟನೆಯ ಸ್ಥಳೀಯ ಅಧ್ಯಕ್ಷ ಸೈಯದ್ ಅಬ್ದುಲ್ ಸತ್ತಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.