ಹುಲಸೂರ: ‘ಮಹರ್ಷಿ ವಾಲ್ಮೀಕಿಯು ರಾಮಾಯಣ ಗ್ರಂಥವನ್ನು ರಚಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಬಿತ್ತಿ, ಮನುಕುಲದ ಉದ್ಧಾರ ಮಾಡಿರುವ ಮಹಾನ್ ಋಷಿ’ ಎಂದು ತಹಶೀಲ್ದಾರ್ ಶಿವಾನಂದ ಮೇತ್ರಿ ಹೇಳಿದರು.
ಪಟ್ಟಣದ ಸರ್ಕಾರಿ ಕಚೇರಿ, ತಾ.ಪಂ, ಗ್ರಾ.ಪಂ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ತ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ‘ಸಮಾಜಕ್ಕೆ ಸಮತೆ ಮತ್ತು ಮಮತೆಯ ಸಂದೇಶ ನೀಡಿದ ಮಹರ್ಷಿ ವಾಲ್ಮೀಕಿ ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಗೌರವಯುತ ಬದುಕು ನಡೆಸಲು ಸಾಧ್ಯ’ ಎಂದು ಹೇಳಿದರು.
ಕಂದಾಯ ನೀರಿಕ್ಷಕರು ಶರಣಬಸಪ್ಪ, ಅಮಿತ ಪಾಲಾಪುರೆ, ಮಹೇಶ ಭೋಸ್ಲೆ, ರಾಜಕುಮಾರ, ಗ್ರಾಮ ಆಡಳಿತ ಆಧಿಕಾರಿ ನಾಗರಾಜ ಹಾಗೂ ಸಾರ್ವಜನಿಕರು ಸೇರಿ ಇತರೆ ಕಚೇರಿ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.