
ಭಾಲ್ಕಿ: ‘ವ್ಯಕ್ತಿ ಶಕ್ತಿಯಾಗುವುದು, ನರ ಹರನಾಗುವುದು, ಸಾಮಾನ್ಯನು ಅಸಾಮಾನ್ಯನಾಗುವುದು ನಡೆ-ನುಡಿ, ಆಚಾರ–ವಿಚಾರಗಳಿಂದ ಮಾತ್ರ ಸಾಧ್ಯ’ ಎಂದು ಉಪನ್ಯಾಸಕಿ ಆರತಿ ಪಾತ್ರೆ ಹೇಳಿದರು.
ಪಟ್ಟಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಬೀದರ್, ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಭಾಲ್ಕಿ ಸಹಯೋಗದಲ್ಲಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಿವೃತ್ತ ಕೃಷಿ ನಿರ್ದೇಶಕ ಶಿಖರೇಶ್ವರ ಶೆಟಕಾರ್ ಮಾತನಾಡಿ, ‘ಕಾಯಕದಿಂದ ವ್ಯಕ್ತಿಯ ಉನ್ನತಿ, ಸಮಾಜದಿಂದ ಗೌರವ, ಆರೋಗ್ಯ ವೃದ್ಧಿ ಆಗುತ್ತದೆ’ ಎಂದು ತಿಳಿಸಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ ಪ್ರಾಸ್ತಾವಿಕವಾಗಿ ಮಾತನಾಡಿದರು.
ನೀಲಮ್ಮ ನಾಗನ್ನಾಥ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಿಕಾರ್ಜುನ ಡೋಣಗಾಪುರೆ ಪ್ರಾರ್ಥಿಸಿದರು. ವಿಶ್ವಕರ್ಮ ಸಮಾಜದ ತಾಲ್ಲೂಕು ಅಧ್ಯಕ್ಷ ಧನರಾಜ ಪಂಚಾಳ ಧ್ವಜಾರೋಹಣ ನೆರವೇರಿಸಿದರು. ಪುಣ್ಯವತಿ ಶಂಭುಲಿಂಗ ಕಾಮಣ್ಣ ಸ್ವಾಗತಿಸಿದರು. ಅಶೋಕ ಭಂಡಾರಿ ನಿರೂಪಿಸಿದರು. ಸಂತೋಷ ಹಡಪದ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.