
ಕಮಠಾಣ(ಜನವಾಡ): ಬೀದರ್ ತಾಲ್ಲೂಕಿನ ಕಮಠಾಣದಲ್ಲಿ ಶರಭಾವತಾರ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಡಿ.14ರಿಂದ 16 ರವರೆಗೆ ಜರುಗಲಿದೆ.
ನೌಬಾದ್‍ನ ಶಿವಯೋಗಾಶ್ರಮದ ರಾಜಶೇಖರ ಶಿವಾಚಾರ್ಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಜಾತ್ರಾ ಮಹೋತ್ಸವದಲ್ಲಿ ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯರು ಪಾಲ್ಗೊಳ್ಳಲಿದ್ದಾರೆ. 14ರಂದು ಬೆಳಿಗ್ಗೆ ವೀರಭದ್ರೇಶ್ವರ ರುದ್ರಾಭಿಷೇಕದೊಂದಿಗೆ ಜಾತ್ರೆಗೆ ಚಾಲನೆ ಸಿಗಲಿದೆ. ಸಂಜೆ 6.30ಕ್ಕೆ ದೀಪೋತ್ಸವ, ಸಂಜೆ 7.30ಕ್ಕೆ ಪಲ್ಲಕ್ಕಿ ಮೆರವಣಿಗೆ ಜರುಗಲಿದೆ. ಡಿ. 15ರಂದು ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯರು, ವಾರಾಣಸಿಯ ವಿಶ್ವರಾಧ್ಯ ಅವರ ಉತ್ಸವ, ಮೆರವಣಿಗೆ, ಧರ್ಮಸಭೆ, ಸಂಜೆ 6ಕ್ಕೆ ಮಹಾ ರಥೋತ್ಸವ ನಡೆಯಲಿವೆ. 16ರಂದು ಮಧ್ಯಾಹ್ನ 2ಕ್ಕೆ ಜಂಗಿ ಕುಸ್ತಿ ಪಂದ್ಯಗಳು ಜರುಗಲಿವೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಕುಶಾಲರಾವ ಯಾಬಾ, ಸಂಚಾಲಕ ಶಿವಯ್ಯ ಸ್ವಾಮಿ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಕುಮಾರ ಯಾಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.