ADVERTISEMENT

ವೀರಭದ್ರೇಶ್ವರ ಜಾತ್ರೆ ಸರಳ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 7:37 IST
Last Updated 9 ಜನವರಿ 2022, 7:37 IST
ಹುಮನಾಬಾದ್ ಪಟ್ಟಣದ ಬಸವರಾಜ ಪಾಟೀಲ ಕಲ್ಯಾಣ ಮಂಟಪದಲ್ಲಿ ನಡೆದ ವೀರಭದ್ರೇಶ್ವರ ಜಾತ್ರೆ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು. ಚಂದ್ರಶೇಖರ್ ಪಾಟೀಲ, ಭೀಮರಾವ್ ಪಾಟೀಲ, ಸುಭಾಷ ಕಲ್ಲೂರು, ಸಹಾಯಕ ಆಯುಕ್ತ ಭುವನೇಶ್ವರ ಪಾಟೀಲ, ಡಿವೈಎಸ್ಪಿ ಸೋಮಲಿಂಗ ಕುಂಬಾರ ಇದ್ದರು
ಹುಮನಾಬಾದ್ ಪಟ್ಟಣದ ಬಸವರಾಜ ಪಾಟೀಲ ಕಲ್ಯಾಣ ಮಂಟಪದಲ್ಲಿ ನಡೆದ ವೀರಭದ್ರೇಶ್ವರ ಜಾತ್ರೆ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು. ಚಂದ್ರಶೇಖರ್ ಪಾಟೀಲ, ಭೀಮರಾವ್ ಪಾಟೀಲ, ಸುಭಾಷ ಕಲ್ಲೂರು, ಸಹಾಯಕ ಆಯುಕ್ತ ಭುವನೇಶ್ವರ ಪಾಟೀಲ, ಡಿವೈಎಸ್ಪಿ ಸೋಮಲಿಂಗ ಕುಂಬಾರ ಇದ್ದರು   

ಹುಮನಾಬಾದ್: ಪಟ್ಟಣದ ವೀರಭದ್ರೇಶ್ವರ ಜಾತ್ರೆ ಮೋಹೋತ್ಸವವನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸರಳವಾಗಿ ಆಚರಿಸಬೇಕಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ಹತ್ತಿರದ ಬಸವರಾಜ ಎಚ್.ಪಾಟೀಲ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ವರ್ಷದಂತೆ ಅತ್ಯಂತ ಸರಳವಾಗಿ ಜಾತ್ರೆ ಆಚರಿಸುವ ಅನಿವಾರ್ಯ ಬಂದಿದ್ದು, ಜಾತ್ರೆಯಲ್ಲಿ ಯಾವುದೇ ಅಂಗಡಿ ಮತ್ತು ನಾಟಕ ಪ್ರದರ್ಶನ ಕಂಪನಿಗಳನ್ನು ಹಾಕುವುದಕ್ಕೆ ಅವಕಾಶವಿರುವುದಿಲ್ಲ ಎಂದರು.

ADVERTISEMENT

ರೇಣುಕ ವೀರಗಂಗಾಧರ ಶಿವಾಚಾರ್ಯರು ಆಶೀರ್ವಚನ ನೀಡಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಮಾತನಾಡಿದರು. ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಬಿಎಸ್.ಎಸ್.ಕೆ ಅಧ್ಯಕ್ಷ ಸುಭಾಷ್ ಕಲ್ಲೂರು, ದೇವಸ್ಥಾನ ಸಮಿತಿ ಅಧ್ಯಕ್ಷ ವೀರಣ್ಣ ಪಾಟೀಲ, ಸಹಾಯಕ ಆಯುಕ್ತ ಭುವನೇಶ್ವರ ಪಾಟೀಲ, ತಹಶೀಲ್ದಾರ್ ಪ್ರದೀಕುಮಾರ್ ಹಿರೇಮಠ, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಅಗ್ನಿ ಕುಂಡಾ ಉಸ್ತುವಾರಿ ದತ್ತಕುಮಾರ್ ಚಿದ್ರಿ, ಬಸವರಾ ಆರ್ಯ, ಮಲ್ಲಿಕಾರ್ಜುನ ಮಾಶೆಟ್ಟಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.