ADVERTISEMENT

ಬೀದರ್‌ ಎಪಿಎಂಸಿ ಅಧ್ಯಕ್ಷರಾಗಿ ವಿಜಯಕುಮಾರ ಆನಂದೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 12:48 IST
Last Updated 6 ಫೆಬ್ರುವರಿ 2021, 12:48 IST
ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ ಆನಂದೆ ಅವರು ನಗರದಲ್ಲಿ ಶನಿವಾರ ಬಿಜೆಪಿ ಮುಖಂಡರೊಂದಿಗೆ ಗೆಲುವಿನ ಸಂಕೇತ ತೋರಿದರು. ಸೂರ್ಯಕಾಂತ ನಾಗಮಾರಪಳ್ಳಿ, ಡಾ. ಶೈಲೇಂದ್ರ ಬೆಲ್ದಾಳೆ, ವಿಜಯಕುಮಾರ ಎಸ್. ಪಾಟೀಲ ಗಾದಗಿ ಇದ್ದರು
ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ ಆನಂದೆ ಅವರು ನಗರದಲ್ಲಿ ಶನಿವಾರ ಬಿಜೆಪಿ ಮುಖಂಡರೊಂದಿಗೆ ಗೆಲುವಿನ ಸಂಕೇತ ತೋರಿದರು. ಸೂರ್ಯಕಾಂತ ನಾಗಮಾರಪಳ್ಳಿ, ಡಾ. ಶೈಲೇಂದ್ರ ಬೆಲ್ದಾಳೆ, ವಿಜಯಕುಮಾರ ಎಸ್. ಪಾಟೀಲ ಗಾದಗಿ ಇದ್ದರು   

ಬೀದರ್: ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ವಿಜಯಕುಮಾರ ಆನಂದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಆನಂದೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ಗಂಗಾದೇವಿ ಅವರು ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು. ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು.

ಸಮಿತಿಯ ಮೂರನೇ ಅವಧಿಯ 20 ತಿಂಗಳ ಪೈಕಿ ಹಿಂದಿನ ಅಧ್ಯಕ್ಷ ಅನಿಲಕುಮಾರ ಪನಾಳೆ ಹಾಗೂ ವಿಜಯಕುಮಾರ ಆನಂದೆ ನಡುವೆ ಪಕ್ಷದ ಮುಖಂಡರ ಸಮ್ಮುಖದಲ್ಲಿ 6-14 ತಿಂಗಳ ಒಪ್ಪಂದ ಆಗಿತ್ತು. ಆರು ತಿಂಗಳ ಅವಧಿ ಪೂರ್ಣಗೊಂಡ ಪ್ರಯುಕ್ತ ಪನಾಳೆ ಅವರು ಜನವರಿ 11 ರಂದು ಎಪಿಎಂಸಿ ಕಾರ್ಯದರ್ಶಿ ಶಿವಶರಣಪ್ಪ ಮಜಗೆ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ನೂತನವಾಗಿ ಆಯ್ಕೆಯಾದ ಆನಂದೆ ಅವರ ಅಧಿಕಾರ ಅವಧಿ 13 ತಿಂಗಳು ಇದೆ.

ADVERTISEMENT

ಬಿಜೆಪಿ ಕಾರ್ಯಕರ್ತರ ಸಂಭ್ರಮ

ವಿಜಯಕುಮಾರ ಆನಂದೆ ಆಯ್ಕೆ ಪ್ರಕಟಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಸಮಿತಿಯ ಕಚೇರಿ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಅನಿಲಕುಮಾರ ಪನಾಳೆ ಅವರು ನೂತನ ಅಧ್ಯಕ್ಷರನ್ನು ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು. ಹಣಮಂತ ಬುಳ್ಳಾ, ವಿರೂಪಾಕ್ಷ ಗಾದಗಿ, ನಂದಕುಮಾರ ಪಾಟೀಲ ಇದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ರೈತರ ಹಿತರಕ್ಷಣೆಗೆ ಶ್ರಮಿಸಲಾಗುವುದು ಎಂದು ಆನಂದೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.