ADVERTISEMENT

ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 15:28 IST
Last Updated 11 ಸೆಪ್ಟೆಂಬರ್ 2019, 15:28 IST
ಬೀದರ್ ತಾಲ್ಲೂಕಿನ ಜನವಾಡ ಹತ್ತಿರದ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವಾಣ್‌ ವಾರ್ತಾ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮಗಳ ವಾಹನಕ್ಕೆ ಬುಧವಾರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು
ಬೀದರ್ ತಾಲ್ಲೂಕಿನ ಜನವಾಡ ಹತ್ತಿರದ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಪಶು ಸಂಗೋಪನಾ ಸಚಿವ ಪ್ರಭು ಚವಾಣ್‌ ವಾರ್ತಾ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮಗಳ ವಾಹನಕ್ಕೆ ಬುಧವಾರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು   

ಜನವಾಡ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಭಾಲ್ಕಿ ತಾಲ್ಲೂಕಿನ ಆಯ್ದ ಗ್ರಾಮಗಳಲ್ಲಿ ಸೆಪ್ಟೆಂಬರ್‌ 20 ರ ವರೆಗೆ ನಡೆಯಲಿರುವ 2019-20ನೇ ಸಾಲಿನ ಗ್ರಾಮ ಸಂಪರ್ಕ ಕಾರ್ಯಕ್ರಮಗಳಾದ ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವಾಣ್‌ ಬೀದರ್‌ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

‘ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ದಿಸೆಯಲ್ಲಿ ವಾರ್ತಾ ಇಲಾಖೆಯು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.

ಚಿಮಕೋಡ ಕಲಾ ತಂಡದ ವೀಣಾ ದೇವಿದಾಸ ಚಿಮಕೋಡ, ಬಕ್ಕಪ್ಪ ದಂಡಿನ್, ಯಲ್ಲಾಲಿಂಗ ಸುಣಗಾರ, ನಂದೀಶ್ವರ ನಾಟ್ಯ ಸಂಘದ ದೇವಿದಾಸ ಚಿಮಕೋಡ, ಶಾಂತಮ್ಮ ಡೊಣಗಾಪುರ, ಸಿದ್ಧಲಿಂಗ ಸುಣಗಾರ ಹಾಗೂ ಸಂಗಡಿಗರು ಜಾನಪದ ಹಾಡು ಹಾಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಞಾನೇಂದ್ರಕುಮಾರ ಗಂಗ್ವಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ಸಿಬ್ಬಂದಿ ವಿಜಯಕೃಷ್ಣ ಸೋಲಪುರ, ಬಿಂದುಸಾರ ಧನ್ನೂರ, ತುಳಜಪ್ಪ ಬುಧೇರಾ, ಓಷಿನ್, ಸುಧಾರಾಣಿ, ಅವಿನಾಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.