ಅಮಾನತು
ಔರಾದ್: ತಾಲ್ಲೂಕಿನ ವಡಗಾಂವ್ (ಡಿ) ಗ್ರಾಮ ಆಡಳಿತಾಧಿಕಾರಿ ನಾಮದೇವ ಅವರನ್ನು ಸೇವೆಯಿಂದ ಅಮಾನತು ಮಾಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರೈತರ ವಿವಿಧ ಕೆಲಸ ಮಾಡಿಕೊಡಲು ಹಾಗೂ ಜನನ, ಮರಣ ಪ್ರಮಾಣಪತ್ರ ಪಂಚನಾಮ ವರದಿ ಸಲ್ಲಿಸಲು ವಿಳಂಬ ಮಾಡುವುದು ಹಾಗೂ ರೈತರೊಬ್ಬರಿಂದ ಲಂಚ ಕೇಳಿರುವ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.