ಭಾಲ್ಕಿ: ‘ಭಾರತದ ಆರ್ಥಿಕ ಅಭಿವೃದ್ಧಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಅನನ್ಯವಾಗಿದೆ’ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಲ್ತಾಫ್ ಮಿಯಾ ಹೇಳಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ವಿಶ್ವೇಶ್ವರಯ್ಯನವರು ಜೀವರಾಶಿಗಳನ್ನು ಕಾಪಾಡುವ ಜಲಸಂಪನ್ಮೂಲ ರಕ್ಷಣೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ಯುವ ಎಂಜಿನಿಯರ್‌ಗಳು ಅನುಸರಿಸಿ, ನೂತನ ಆವಿಷ್ಕಾರ, ಹೊಸ ಚಿಂತನೆಗಳೊಂದಿಗೆ ಸದೃಢ ಭಾರತ ಸಾಕಾರಕ್ಕೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.
ಪ್ರಥಮ ದರ್ಜೆ ಗುತ್ತಿಗೆದಾರರಾದ ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ, ರಿಯಾಜ್ ಅಹ್ಮದ್, ಶಿವಾಜಿ ಚವ್ಹಾಣ, ಮಹಾದೇವ, ಸಹಾಯಕ ಎಂಜಿನಿಯರ್‌ಗಳಾದ ಲೋಹಿತ್ ಉತ್ಕಾರ್ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.