ADVERTISEMENT

ಮತ ಎಣಿಕೆ: ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 5:19 IST
Last Updated 23 ಏಪ್ರಿಲ್ 2021, 5:19 IST

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ, ಬೀದರ್ ನಗರಸಭೆ ಹಾಗೂ ಹಳ್ಳಿಖೇಡ ಪಟ್ಟಣ ಪಂಚಾಯಿತಿ ವಾರ್ಡ್‌ಗಳ ಚುನಾವಣೆಯ ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮೇ 2ರಂದು ನಗರದ ಭೂಮರೆಡ್ಡಿ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಬಸವಕಲ್ಯಾಣ ವಿಧಾಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಮತ ಎಣಿಕೆಯ ಮುನ್ನಾದಿನ ಮಧ್ಯರಾತ್ರಿಯಿಂದ ಮರುದಿನ ಸಂಜೆ 5 ಗಂಟೆಯ ವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೀದರ್ ನಗರಸಭೆ, ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಪಟ್ಟಣ ಪಂಚಾಯಿತಿಯ ವಾರ್ಡ್ ಸಂಖ್ಯೆ 11ರ ಚುನಾವಣೆ ಏಪ್ರಿಲ್ 27ರಂದು ನಡೆಯಲಿದೆ. 30 ರಂದು ಗುರುನಾನಕ್ ಪಬ್ಲಿಕ್ ಶಾಲೆಯ ಮತ ಎಣಿಕೆ ಕೇಂದ್ರ ಹಾಗೂ ಹುಮನಾಬಾದ್‌ ತಹಶೀಲ್ದಾರ್‌ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆ ಹಾಗೂ ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.