ADVERTISEMENT

ಸ್ವಾಭಿಮಾನದಿಂದ ಮತ ಚಲಾಯಿಸಿ: ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 5:29 IST
Last Updated 7 ಏಪ್ರಿಲ್ 2021, 5:29 IST
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕೊಹಿನೂರ ವಾಡಿಯಲ್ಲಿ ಮಂಗಳವಾರ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮತಯಾಚನೆ ನಡೆಸಿದರು
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕೊಹಿನೂರ ವಾಡಿಯಲ್ಲಿ ಮಂಗಳವಾರ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮತಯಾಚನೆ ನಡೆಸಿದರು   

ಕೊಹಿನೂರವಾಡಿ (ಬಸವಕಲ್ಯಾಣ): ‘ಕ್ಷೇತ್ರದ ಮತದಾರರು ಸ್ವಾಭಿಮಾನದಿಂದ ಮತ ಚಲಾಯಿಸಬೇಕು. ಹೊರಗಿನವರನ್ನು ಗೆಲ್ಲಿಸಬಾರದು ಎಂಬ ಉದ್ದೇಶದಿಂದ ನಾನು ಸ್ಪರ್ಧಿಸಿದ್ದು, ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಬೇಕು’ ಎಂದು ಈ ಕ್ಷೇತ್ರದ ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಕೇಳಿಕೊಂಡರು.

ವಿಧಾನಸಭಾ ಕ್ಷೇತ್ರದ ಕೊಹಿನೂರವಾಡಿಯಲ್ಲಿ ಮಂಗಳವಾರ ಆಯೋಜಿಸಿದ್ದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ನಾನು ಎರಡು ಸಲ ಶಾಸಕನಾಗಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೈಗೊಂಡಿದ್ದೇನೆ. ಕಳೆದ ಸಲ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಅನುಭವಿಸಿದೆ. ಈ ಸಲವೂ ಟಿಕೆಟ್ ದೊರಕಬಹುದು ಎಂಬ ಭರವಸೆ ಇತ್ತು. ಆದರೆ, ಅನ್ಯರನ್ನು ಕಣಕ್ಕೆ ಇಳಿಸಿದ್ದರಿಂದ ಕ್ಷೇತ್ರದ ಸ್ವಾಭಿಮಾನಿ ಬಳಗದವರು ನನ್ನನ್ನು ಕಣದಿಂದ ಹಿಂದಕ್ಕೆ ಸರಿಯ ದಂತೆ ಒತ್ತಡ ಹೇರಿದರು’ ಎಂದರು.

ADVERTISEMENT

‘ಕ್ಷೇತ್ರದಲ್ಲಿ ಎಲ್ಲ ಸಮಸ್ಯೆಗಳ ಬಗ್ಗೆ ಅರಿವಿದೆ. ಸರ್ವರೊಂದಿಗೆ ಸಂಪರ್ಕದಲ್ಲಿದ್ದೇನೆ. ಯಾರಿಗೂ ಅನ್ಯಾಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಈ ಸಲ ಯಾರೂ ಸ್ವಾಭಿಮಾನಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು’ ಎಂದರು.

ಮುಖಂಡರಾದ ಕಾಳಿದಾಸ ಜಾಧವ, ಸಂಜೀವ ಗಾಯಕವಾಡ, ಮಾಧವ ಹಸೂರೆ, ಬಸವರಾಜ ಖೂಬಾ, ಧನರಾಜ ಪಡೆ, ಇಸ್ಮಾಯಿಲ್‌ ಬೆಳಕೋಣಿ, ಖಯಾಮೊದ್ದೀನ್, ರಶೀದ್ ಕುರೇಶಿ ಪಾಲ್ಗೊಂಡಿದ್ದರು.

ಕೊಹಿನೂರ, ಅಟ್ಟೂರ್, ಪಹಾಡ್, ಲಾಡವಂತಿ ಗ್ರಾಮಗಳಲ್ಲಿ ಪ್ರಚಾರ ಸಭೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.