ADVERTISEMENT

ತಪ್ಪದೆ ಮತದಾನ ಮಾಡಿ: ಸಚಿವ ಚವಾಣ್

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 12:39 IST
Last Updated 16 ಏಪ್ರಿಲ್ 2021, 12:39 IST
ಸಚಿವ ಪ್ರಭು ಚವಾಣ್
ಸಚಿವ ಪ್ರಭು ಚವಾಣ್   

ಬೀದರ್: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಎಲ್ಲ ಅರ್ಹ ಮತದಾರರು ತಪ್ಪದೆ ಮತದಾನ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಸಂವಿಧಾನವನ್ನು ಗೌರವಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.

ಬಸವಕಲ್ಯಾಣ ಉಪ ಚುನಾವಣೆಯು ಮಾದರಿಯಾಗಬೇಕು. ಮತದಾನ ಶಾಂತಿಯುತವಾಗಿ ನಡೆಯುವಂತಾಗಲು ಎಲ್ಲರೂ ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆಗಳಿಗೆ ಸಹಕರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ಕೋರಿದ್ದಾರೆ.

ADVERTISEMENT

ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾರರು ಸಂಬಂಧಿಸಿದ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ಮತಗಟ್ಟೆಗೆ ಹೋದಾಗ ಕೋವಿಡ್ 19 ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.