ADVERTISEMENT

ಮತದಾನ ಪವಿತ್ರ ಕರ್ತವ್ಯ

ಪ್ರಾಚಾರ್ಯ ಚನ್ನಬಸವ ಹೇಡೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 14:37 IST
Last Updated 25 ಜನವರಿ 2020, 14:37 IST
ಬೀದರ್‌ನ ಕರ್ನಾಟಕ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಬಗದಲ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ಮಾತನಾಡಿದರು
ಬೀದರ್‌ನ ಕರ್ನಾಟಕ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಬಗದಲ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ಮಾತನಾಡಿದರು   

ಬೀದರ್: ‘ಮತದಾನ ಪವಿತ್ರವಾದ ಕರ್ತವ್ಯವಾಗಿದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಈ ಮೂಲಕ ಉತ್ತಮ ಸರ್ಕಾರ ರಚನೆಗೆ ನೆರವಾಗಬೇಕು’ ಎಂದು ಬೀದರ್ ತಾಲ್ಲೂಕಿನ ಬಗದಲ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಚನ್ನಬಸವ ಹೇಡೆ ಹೇಳಿದರು.

ನಗರದ ಕರ್ನಾಟಕ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮತದಾರರು ಹಣದ ಆಮಿಷಕ್ಕೆ ಒಳಗಾಗಿ ಮತದಾನ ಮಾಡಿದರೆ ಅಯೋಗ್ಯರು ಅಧಿಕಾರಕ್ಕೆ ಬರುವ ಸಾಧ್ಯತೆ ಇರುತ್ತದೆ, ಇದರಿಂದ ಶಾಸಕಾಂಗದ ಗುಣಮಟ್ಟ ಕುಸಿದು ಸರ್ಕಾರದ ತಳಹದಿಯೇ ದುರ್ಬಲಗೊಳ್ಳುತ್ತದೆ.
ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.

ಪ್ರಾಚಾರ್ಯೆ ಕಲ್ಪನಾ ದೇಶಪಾಂಡೆ ಮಾತನಾಡಿ,‘ 18 ವರ್ಷ ಮೇಲ್ಟಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ನನ್ನ ಒಂದು ಮತದಾನದಿಂದ ಏನಾಗುವುದು ಎನ್ನುವ ನಿರ್ಲಕ್ಷ್ಯ ಬೇಡ. ಹಿಂದೆ ಒಂದು ಮತದಿಂದ ಸೋತವರು ಹಾಗೂ ಗೆದ್ದವರನ್ನು ಕೂಡ ನಾವು ನೋಡಿದ್ದೇವೆ’ ಎಂದು ತಿಳಿಸಿದರು.

ADVERTISEMENT

‘ಗ್ರಾಮೀಣ ಪ್ರದೇಶಗಳಿಗಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾಗುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಉಪ ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗರಗಿ ಮಾತನಾಡಿದರು. ಮಹಾನಂದಾ ಮಡಕಿ, ಪ್ರೊ.ಜ್ಯೋತಿ ಕರ್ಪೂರ, ರವೀಂದ್ರ ರೆಡ್ಡಿ, ರಾಜಮೋಹನ ಪರದೇಶಿ ಇದ್ದರು. ಕಲಾ ವಿಭಾಗದ ಮುಖ್ಯಸ್ಥ ಪ್ರೊ.ವೈಜಿನಾಥ ಚಿಕ್ಕಬಸೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಸಚೀನ ವಿಶ್ವಕರ್ಮ ನಿರೂಪಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಗಾಯತ್ರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.