ADVERTISEMENT

ಬೀದರ್: ಬರಬೇಕಿದೆ ಇನ್ನೂ 4,642 ಜನರ ವರದಿ

ಮಸ್ಕತ್‌ನಿಂದ ಬಂದ್ ಬೀದರ್‌ನ ವ್ಯಕ್ತಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 26 ಮೇ 2020, 0:41 IST
Last Updated 26 ಮೇ 2020, 0:41 IST
ಬೀದರ್‌ ಜಿಲ್ಲೆಯ ಕಮಲನಗರ ಚೆಕ್‌ಪೋಸ್ಟ್‌ನಲ್ಲಿ ಮಹಾರಾಷ್ಟ್ರದಿಂದ ಕಾಲ್ನಡಿಗೆಯಲ್ಲಿ ಬಂದ ಮೂವರ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿ
ಬೀದರ್‌ ಜಿಲ್ಲೆಯ ಕಮಲನಗರ ಚೆಕ್‌ಪೋಸ್ಟ್‌ನಲ್ಲಿ ಮಹಾರಾಷ್ಟ್ರದಿಂದ ಕಾಲ್ನಡಿಗೆಯಲ್ಲಿ ಬಂದ ಮೂವರ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿ   

ಬೀದರ್: ಮಸ್ಕತ್‌ನಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದ ಬೀದರ್‌ನ 40 ವರ್ಷದ ವ್ಯಕ್ತಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವ್ಯಕ್ತಿಯ ಹೆಸರನ್ನು ಬೆಂಗಳೂರು ಪಟ್ಟಿಯಲ್ಲಿ ಪರಿಗಣಿಸಲಾಗಿದೆ.

ಮಸ್ಕತ್‌ನಿಂದ ಬಂದಿಳಿದ ತಕ್ಷಣ ವ್ಯಕ್ತಿಯ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಿಗದಿತ ಆಸ್ಪತ್ರೆಗೆ ಕಳಿಸಿಕೊಡಲಾಗಿತ್ತು. ಗಂಟಲು ದ್ರವ ಮಾದರಿ ಪಡೆದು ಪರೀಕ್ಷೆ ನಡೆಸಿದಾಗ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈವರೆಗೆ 15,974 ಜನರ ಗಂಟಲು ದ್ರವ ಮಾದರಿ ಪಡೆಯಲಾಗಿದೆ. ಸೋಮವಾರ 1,063 ಸೇರಿದಂತೆ
ಈವರೆಗೆ 11,247 ಜನರ ವರದಿ ನೆಗೆಟಿವ್ ಬಂದಿದೆ. ಕೋವಿಡ್ 19 ಸೋಂಕಿನಿಂದ ಒಟ್ಟು ಮೂವರು ಮೃತಪಟ್ಟಿದ್ದಾರೆ.

ADVERTISEMENT

ಪಾಸಿಟಿವ್ ಬಂದ 21 ಜನರಿಗೆ ಚಿಕಿತ್ಸೆ ನೀಡಿ ಗುಣಮುಖರಾದ ಮೇಲೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸೋಮವಾರ 1,482 ಜನರ ತಪಾಸಣೆ ನಡೆಸಲಾಗಿದೆ. 428 ಜನರನ್ನು ಹೋಮ್ ಕ್ವಾರಂಟೈನ್‌ಗೆ ಕಳಿಸಲಾಗಿದೆ. 126 ಜನರು ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದಾರೆ. ಪ್ರಸ್ತುತ 62 ಪ್ರಕರಣಗಳು ಸಕ್ರೀಯವಾಗಿವೆ. ಇನ್ನೂ 4,642 ಜನರ ವೈದ್ಯಕೀಯ ವರದಿ ಬರಬೇಕಿದೆ.

ಜಿಲ್ಲೆಯ 17 ಚೆಕ್‌ಪೋಸ್ಟ್‌ಗಳ ಪೈಕಿ ಬಸವಕಲ್ಯಾಣದ ಚಂಡಕಾಪುರ, ಕಮಲನಗರ ಹಾಗೂ ಬೀದರ್ ತಾಲ್ಲೂಕಿನ ಭಂಗೂರ್ ಬಳಿ ಚೆಕ್‌ಪೋಸ್ಟ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಎರಡು ದಿನಗಳಿಂದ ಗಡಿಗಳನ್ನು ಬಂದ್ ಮಾಡಲಾಗಿದೆ.

ಮಹಾರಾಷ್ಟ್ರ ಹಾಗೂ ತೆಲಂಗಾಣದ ವಲಸೆ ಕಾರ್ಮಿಕರು ರಾತ್ರಿ ವೇಳೆಯಲ್ಲಿ ಹೊಲಗದ್ದೆ ಮೂಲಕ ಊರು ಸೇರುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.