ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ, ಎರಡು ನಿಮಿಷ ಮೌನ ಆಚರಿಸಿ ಶ್ರದ್ದಾಂಜಲಿ ಸಲ್ಲಿಸಿದರು. ಭಯೋತ್ಪಾದಕರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಜರುಗಿಸಬೇಕೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಹೆಸರಿಗೆ ಬರೆದ ಮನವಿ ಪತ್ರ ಓದಿ ಆಗ್ರಹಿಸಿದರು.
ಬೀದರ್: ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಂದಿರುವ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯ ಜನ ಪಾಲ್ಗೊಂಡಿದ್ದರು.
ನಗರದ ಚೌಬಾರ ಸಮೀಪದ ಜಾಮೀಯಾ ಮಸೀದಿಯಿಂದ ಆರಂಭಗೊಂಡ ಪ್ರತಿಭಟನಾ ರ್‍ಯಾಲಿ ಮಹಮೂದ್ ಗಾವಾನ್ ವೃತಗತ, ಶಹಾಗಂಜ್ ಮೂಲಕ ಹಾದು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿದೆ.
ತ್ರಿವರ್ಣ ಧ್ವಜ ಹಾಗೂ ಉರ್ದು ಬರಹ ಹೊಂದಿದ ವಕ್ಫ್ ವಿರೋಧಿ ಕಾಯ್ದೆಗೆ ದಿಕ್ಕಾರದ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿದರು. ಪೌರಾಡಳಿತ ಸಚಿವ ರಹೀಂ ಖಾನ್, ಮಂಡಳಿಯ ಅಬ್ದುಲ್ ಖದೀರ್, ಪ್ರಗತಿಪರ ಸಂಘಟನೆಗಳ ಮುಖಂಡರಾದ ಬಾಬುರಾವ್ ಪಾಸ್ವಾನ್, ಮಾರುತಿ ಬೌದ್ಧೆ, ಬಸವರಾಜ ಮಾಳಗೆ ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.