ಬೀದರ್: ‘ನಮ್ದು ತೆರೆದ ಮನೆ, ಹತ್ತು ಬಾಗಿಲು ಇರುತ್ತವೆ. ಒಬ್ಬರ ಕೈಯಲ್ಲಿ ಕಾಂಗ್ರೆಸ್ ಪಕ್ಷ ಇಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
‘ಕಾಂಗ್ರೆಸ್ ಪಕ್ಷ ಒಡೆದ ಮನೆಯಾಗಿದೆ ಎಂದು ಬಿಜೆಪಿಯವರು ಆರೋಪಿಸಿದ್ದಾರಲ್ಲ’ ಎಂಬ ಪತ್ರಕರ್ತರ ಪ್ರಶ್ನೆಗೆ ನಗರದಲ್ಲಿ ಶನಿವಾರ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯುತ್ತದೆ. ಸಾಮೂಹಿಕವಾಗಿಯೇ ಚುನಾವಣೆ ಮಾಡಿದ್ದೇವೆ. ಒಟ್ಟಾಗಿ ಕೆಲಸ ಮಾಡಿದ್ದೇವೆ. ಈಗಲೂ ಜೊತೆಯಲ್ಲಿದ್ದೇವೆ ಎಂದು ಹೇಳಿದರು.
ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ. ನಳಿನಕುಮಾರ್ ಕಟೀಲ್ ಅವರ ನಾಯಕತ್ವವನ್ನು ಅವರ ಪಕ್ಷದವರೇ ಒಪ್ಪುತ್ತಿಲ್ಲ. ಹಿಂದೆ ರಾಜ್ಯದ ಜನ ಬಿಜೆಪಿಯವರಿಗೆ ಜವಾಬ್ದಾರಿ ಕೊಟ್ಟಿದ್ದರು. ಅವರು ಅದನ್ನು ಸರಿಯಾಗಿ ನಿಭಾಯಿಸಲಿಲ್ಲ. ಹೀಗಾಗಿ ಅವರನ್ನು ಸೋಲಿಸಿ ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಕೆಲಸ ಮಾಡುತ್ತಿದ್ದೇವೆ. ಒಂದುವೇಳೆ ಏನಾದರೂ ತಪ್ಪುಗಳಾದರೆ ವಿರೋಧ ಪಕ್ಷದವರು ಸಲಹೆ ಕೊಡಬೇಕು. ಅಸಂಬದ್ಧ ವಿಷಯಗಳನ್ನು ಮಾತನಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.