ADVERTISEMENT

‘ಕೊರೊನಾ ತಡೆಗೆ ಮಾಸ್ಕ್ ಧರಿಸಿ’

ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 8:05 IST
Last Updated 19 ಜೂನ್ 2020, 8:05 IST
ಹುಮನಾಬಾದ್‍ನಲ್ಲಿ ಕೊರೊನಾ ಜಾಗೃತಿ ಜಾಥಾಕ್ಕೆ ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಚಾಲನೆ ನೀಡಿದರು
ಹುಮನಾಬಾದ್‍ನಲ್ಲಿ ಕೊರೊನಾ ಜಾಗೃತಿ ಜಾಥಾಕ್ಕೆ ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಚಾಲನೆ ನೀಡಿದರು   

ಹುಮನಾಬಾದ್:ಕೊರೊನಾ ವೈರಾಣು ತಡೆಯಲು ಪ್ರತಿಯೂಬ್ಬರೂ ಮಾಸ್ಕ್ ಧರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಹೇಳಿದರು.

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಾಸ್ಕ್ ದಿನದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕೊರೊನಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ‘ಮಾಸ್ಕ್ ಧರಿಸಿ ಕೊರೊನಾ ಓಡಿಸಿ, ಸಾನಿಟೈಸರ್ ಬಳಸಿ ಜೀವ ಉಳಿಸಿ’ ಎಂಬ ಘೋಷವಾಕ್ಯದೊಂದಿದೆ ಸಂಕಲ್ಪ ಮಾಡಬೇಕು ಎಂದರು.

ADVERTISEMENT

ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಪ್ರಾರಂಭವಾದ ಜಾಥಾ, ಬಸ್ ನಿಲ್ದಾಣ, ಡಾ.ಅಂಬೇಡ್ಕರ್ ವೃತ್ತ, ಸರ್ದಾರ್‌ ಪಟೇಲ್ ವೃತ್ತ, ಬಾಲಾಜಿ ಮಂದಿರದಿಂದ ಬಸವೇಶ್ವರ ವೃತ್ತದ ವರೆಗೆ ಜಾಥಾ
ನಡೆಯಿತು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪಾ ದಾನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಸಾರ್ವಜನಿಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ನಾಗನಾಥ ಹೂಲಸೂರೆ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಗೋವಿಂದ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಸಿಡಿಪಿಒ ಶೋಭಾ ಕಟ್ಟಿ, ಪುರಸಭೆ ಸದಸ್ಯರಾದ ಅಫ್ಸರ ಮಿಯ್ಯ, ವಿಜಯಕುಮಾರ ಭಾಸಪಳ್ಳಿ, ಮಲ್ಲಿಕಾರ್ಜುನ ಶರ್ಮಾ, ಪಿಎಸ್‍ಐ ರವಿಕುಮಾರ, ಸಚ್ಚಿದಾನಂದ ಮಠಪತಿ, ಗುಂಡು ರೆಡ್ಡಿ ವಾಂಜಿರಿ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.