ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 15:36 IST
Last Updated 17 ಸೆಪ್ಟೆಂಬರ್ 2020, 15:36 IST
ಬೀದರ್‌ನ ಎಫ್‍ಪಿಎಐ ಶಾಖೆ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಶಂಕರ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನ ಎಫ್‍ಪಿಎಐ ಶಾಖೆ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಶಂಕರ ಅವರನ್ನು ಸನ್ಮಾನಿಸಲಾಯಿತು   

ಬೀದರ್‌: ನಗರದ ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು.

ಎಫ್‍ಪಿಎಐ: ನಗರದ ಎಫ್‍ಪಿಎಐ ಶಾಖೆ ಕಚೇರಿಯಲ್ಲಿ ಶಾಖೆ ಅಧ್ಯಕ್ಷೆ ಡಾ. ಆರತಿ ರಘು ಧ್ವಜಾರೋಹಣ ಮಾಡಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಶಂಕರ, ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಮಾತನಾಡಿದರು.

ಎಫ್‍ಪಿಎಐ ಮಾಜಿ ಅಧ್ಯಕ್ಷೆ ಡಾ.ವಿಜಯಶ್ರೀ ಬಶೆಟ್ಟಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಗೌರವ ಖಜಾಂಚಿ ಡಾ.ವಿಜಯ ಕೊಂಡಾ, ಸದಸ್ಯರಾದ ಡಾ.ಸುಭಾಷ ಬಶೆಟ್ಟಿ, ಸುಬ್ರಹ್ಮಣ್ಯ ಪ್ರಭು ಇದ್ದರು.

ADVERTISEMENT

ಪ್ರಥಮ ದರ್ಜೆ ಮಹಿಳಾ ಕಾಲೇಜು:ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪ್ರಾಚಾರ್ಯ ರಾಜಪ್ಪ ಬಬಚಡಿ ಧ್ವಜಾರೋಹಣ ನೆರವೇರಿಸಿದರು.

ಉಪನ್ಯಾಸಕ ಶಾಂತಪ್ಪ, ಪ್ರೊ.ಸಂಜುಕುಮಾರ ಅಪ್ಪೆ, ಪ್ರೊ.ಸುಂದರರಾಜು, ಡಾ.ಭೀಮಷಾ, ವಿದ್ಯಾ ಪಾಟೀಲ, ಪ್ರೊ.ಸಚ್ಚಿದಾನಂದ ರುಮ್ಮಾ, ಪ್ರೊ.ಎಲಿಶಾ, ಪ್ರೊ.ಮನೋಜಕುಮಾರ, ಡಾ.ಮನೋಹರ ಮೇತ್ರೆ, ಶ್ರೀನಿವಾಸ ರೆಡ್ಡಿ ಉಪಸ್ಥಿತರಿದ್ದರು.

ಕೆ.ಪಿ. ಸ್ಕೂಲ್: ನಗರದ ಕೆಪಿ ಸ್ಕೂಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆ ಅಧ್ಯಕ್ಷ ಬಾಬುವಾಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಖ್ಯಗುರು, ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.

ಗ್ಲೋಬಲ್ ಸೈನಿಕ ಅಕಾಡೆಮಿ: ಅಕಾಡೆಮಿ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಕರ್ನಲ್ ಶರಣಪ್ಪ ಸಿಕೇನಪುರ ಧ್ವಜಾರೋಹಣ ಮಾಡಿದರು. ನಿರ್ದೇಶಕ ಆರ್.ಜಿ. ಮಠಪತಿ, ಸಹ ಶಿಕ್ಷಕ ವಿಲ್ಸನ್ ಭಾಸ್ಕರ್ ಮಾತನಾಡಿದರು. ಮುಖ್ಯ ಶಿಕ್ಷಕ, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.