
ಪ್ರಜಾವಾಣಿ ವಾರ್ತೆ
ಔರಾದ್ (ಬೀದರ್ ಜಿಲ್ಲೆ): ಕ್ಷೇತ್ರದ ಶಾಸಕ ಪ್ರಭು ಚವಾಣ್ ಅವರ ವಾಟ್ಸ್ಆ್ಯಪ್ ಸಂಖ್ಯೆಗೆ ಅಶ್ಲೀಲ ವಿಡಿಯೋ ಕಳುಹಿಸಿ ₹30 ಸಾವಿರ ಬೇಡಿಕೆ ಇಟ್ಟಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಾಲ್ಲೂಕಿನ ನಂದಿಬಿಜಲಗಾಂವ್ ತಾಂಡಾದ ನಿವಾಸಿ ವಿಕಾಸ ಪವಾರ್ ಎಂಬಾತನನ್ನು ತೆಲಂಗಾಣದ ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವಿಕಾಸ ಪವಾರ್ ಶಾಸಕರ ಹಾಗೂ ಯುವತಿಯೊಬ್ಬಳ ಫೋಟೋ ಜೋಡಿಸಿ ಹಣ ಹಾಕದಿದ್ದರೆ ಈ ವಿಡಿಯೋ ಯೂಟ್ಯೂಬ್‌ನಲ್ಲಿ ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಕುರಿತು ಸೆ. 8ರಂದು ಹೊಕ್ರಾಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.