ADVERTISEMENT

ಬೀದರ್‌ | ಪತ್ನಿ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 15:48 IST
Last Updated 1 ಅಕ್ಟೋಬರ್ 2024, 15:48 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಬೀದರ್‌: ಹೆಂಡತಿಯ ಶೀಲ ಶಂಕಿಸಿ ಕೊಲೆಗೈದ ಪ್ರಕರಣದ ಅಪರಾಧಿಗೆ ಬೀದರ್‌ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಚಿನ್‌ ಕೌಶಿಕ್‌ ಆರ್‌.ಎನ್‌.ಅವರು ಅಪರಾಧಿ ಜ್ಞಾನೋಬಾ ನಾಮದೇವ ಭಾಲೂಚೆಗೆ ಜೀವಾವಧಿ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿದ್ದಾರೆ. ದಂಡ ಕೊಡದೆ ಇದ್ದಲ್ಲಿ 6 ತಿಂಗಳು ಸಾದಾ ಶಿಕ್ಷೆ ಅನುಭವಿಸಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಪಬ್ಲಿಕ್‌ ಪ್ರಾಸಿಕ್ಯೂಟರ್‌ ಶರಣಗೌಡ ಮಹಿಳೆ ಕುಟುಂಬದ ಪರ ವಾದ ಮಂಡಿಸಿದ್ದರು.

ಆಗಿದ್ದೇನು?: ಔರಾದ್‌ ತಾಲ್ಲೂಕಿನ ಸಾವರಗಾಂವ ಗ್ರಾಮದವನಾದ ಜ್ಞಾನೋಬಾ ಅದೇ ಗ್ರಾಮದವರಾದ ಹೆಂಡತಿ ರೇಖಾಳ ಶೀಲ ಶಂಕಿಸಿ ಸೆಪ್ಟೆಂಬರ್‌ 25, 2015ರಂದು ಮನೆಯಲ್ಲಿದ್ದಾಗ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ, ಗಾಯಗೊಂಡಿದ್ದ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆಪ್ಟೆಂಬರ್‌ 28, 2015ರಂದು ಬೆಳಿಗ್ಗೆ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.