ADVERTISEMENT

ವಿಜಡಂ ಕಾಲೇಜು: ಬಡ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 11:30 IST
Last Updated 8 ಜುಲೈ 2020, 11:30 IST

ಬೀದರ್: ಕೊರೊನಾ ಸೋಂಕಿನ ಕಾರಣ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ರಿಯಾಯಿತಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ವಿಜಡಂ ಪದವಿಪೂರ್ವ ವಿಜ್ಞಾನ ಕಾಲೇಜು ಕಾರ್ಯದರ್ಶಿ ಮಹಮ್ಮದ್ ಆಸಿಫೊದ್ದೀನ್ ತಿಳಿಸಿದ್ದಾರೆ.

ಕೊರೊನಾದಿಂದಾಗಿ ಪಾಲಕರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಶುಲ್ಕದಲ್ಲಿ ಹೆಚ್ಚಳ ಮಾಡುವುದಿಲ್ಲ. ನೀಟ್ ತರಬೇತಿ ಶುಲ್ಕದಲ್ಲೂ ಬಡ ವಿದ್ಯಾರ್ಥಿಗಳಿಗೆ ರಿಯಾಯಿತಿ ಕೊಡಲಾಗುವುದು ಎಂದು ಹೇಳಿದ್ದಾರೆ.

ಕಾಲೇಜಿನಲ್ಲಿ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ನೀಟ್, ಕೆ-ಸೆಟ್‌, ಜೆಇಇ ಪರೀಕ್ಷೆ ತರಬೇತಿಯನ್ನು ಆನ್‍ಲೈನ್ ಮೂಲಕ ಯಶಸ್ವಿಯಾಗಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ಸಹ ಶುರು ಮಾಡಲಾಗುವುದು. ಬರುವ ದಿನಗಳಲ್ಲಿ ಸರ್ಕಾರದ ಆದೇಶ ಬಂದ ನಂತರ ಆನ್‍ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ, ವ್ಯವಸ್ಥಿತವಾಗಿ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ಆನ್‍ಲೈನ್ ಪ್ರವೇಶ ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.