ADVERTISEMENT

ಬೀದರ್: ಸಾಲಬಾಧೆ ತಾಳದೆ ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 14:20 IST
Last Updated 24 ಜನವರಿ 2025, 14:20 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಹುಲಸೂರ: ಸಮೀಪದ ಗಡಿಗೌಡಗಾಂವ ಗ್ರಾಮದಲ್ಲಿ ಮಹಿಳೆಯೊಬ್ಬರು, ಸಾಲಬಾಧೆ ತಾಳದ ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ರೇಷ್ಮಾ ಸುನೀಲ ಸೂರ್ಯವಂಶಿ(25) ಮೃತರು. ಸ್ಥಳೀಯ 6 ಸ್ವ–ಸಹಾಯ ಸಂಘಗಳಲ್ಲಿ ₹ 3 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು. ಸಕಾಲಕ್ಕೆ ಸಾಲ ತೀರಿಸಲು ಸಾಧ್ಯವಾಗದೇ ರೇಷ್ಮಾ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.