ಕಮಲನಗರ: ಹಾವು ಕಚ್ಚಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಜರುಗಿದೆ.
ಸುವರ್ಣಾ ಪ್ರಭು ಸೂರ್ಯವಂಶಿ (45) ಸೊಯಾಬಿನ್ ಹೊಲದಲ್ಲಿ ಕಳೆ ತಗೆಯುತ್ತಿದ್ದಾದ ಕಳೆದ ಮೂರು-ನಾಲ್ಕು ದಿನಗಳ ಹಿಂದೆ ಹಾವು ಕಡಿದಿತ್ತು. ತಕ್ಷಣವೇ ಚಿಕಿತ್ಸೆಗಾಗಿ ಕಮಲನಗರ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ನಂತರ ಲಾತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡುತ್ತಿದ್ದಾಗ ಸುವರ್ಣಾ ಕೊನೆಯುಸಿರಳೆದರು.
ಬುಧವಾರ ಸ್ವಗ್ರಾಮ ಡಿಗ್ಗಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.