ಭಾಲ್ಕಿ: ‘ಮಹಿಳೆಯರು ಕುಟುಂಬ ನಿರ್ವಹಣೆ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು’ ಎಂದು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಗೀತಾ ಈಶ್ವರ ಖಂಡ್ರೆ ತಿಳಿಸಿದರು.
ಪಟ್ಟಣದ ತಳವಾಡೆ ಆಸ್ಪತ್ರೆಯಲ್ಲಿ ಬಿಒಜಿಎಸ್, ಎಚ್‍ಡಿಆರ್ ಹೆಲ್ತ್ ಕೇರ್ ಫೌಂಡೇಶನ್‌ನ ಸಹಯೋಗದಲ್ಲಿ ಭಾನುವಾರ ಗರ್ಭಕಂಠ ಕ್ಯಾನ್ಸರ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಮನೆಯ ಏಳಿಗೆಗಾಗಿ ಸಕಲವನ್ನೂ ಧಾರೆ ಎರೆಯುವ ಮಹಿಳೆಯರು ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂಥ ಬದುಕು ಸಾಗಿಸಬೇಕು’ ಎಂದು ಸಲಹೆ ನೀಡಿದರು.
ತಳವಾಡೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶೈಲಜಾ ತಳವಾಡೆ ಮಾತನಾಡಿ,‘ಹದಿ ಹರೆಯದ ಹೆಣ್ಣು ಮಕ್ಕಳು, ಮಹಿಳೆಯರು ಗೊತ್ತಿಲ್ಲದೇ ಗರ್ಭಕಂಠ ಕ್ಯಾನ್ಸರ್‌ಗೆ ತುತ್ತಾಗಿ ಅಮೂಲ್ಯ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಎಚ್‍ಪಿವಿ ಲಸಿಕೆ ಪಡೆಯುವುದು ಅಗತ್ಯ. ನಮ್ಮ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಲಸಿಕೆ ನೀಡಲಾಗುತ್ತಿದ್ದು, ಎಲ್ಲರೂ ಸದುಪಯೋಗ ಪಡೆಸಿಕೊಳ್ಳಬೇಕು’ ಎಂದು ತಿಳಿಸಿದರು.
ಡಾ.ಉಮಾ ದೇಶಮುಖ ಹಾಗೂ ಲಲಿತಮ್ಮ ಮಾತನಾಡಿದರು.
ಡಾ.ವಿಜಯಶ್ರೀ ಬಶೆಟ್ಟಿ, ಡಾ.ರಾಜಲಕ್ಷ್ಮಿ ಚಂದಾ, ಡಾ.ಅನಿಲ್ ಕುಮಾರ ತಳವಾಡೆ ಸೇರಿದಂತೆ ಹಲವರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.