ADVERTISEMENT

ಜಾಗರೂಕತೆಯಿಂದ ಕೆಲಸ ಮಾಡಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 14:16 IST
Last Updated 6 ಡಿಸೆಂಬರ್ 2021, 14:16 IST
ಬೀದರ್‌ನಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಸೂಕ್ಷ್ಮ ವೀಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಚುನಾವಣಾ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಗೌತಮ ಅರಳಿ ಮಾತನಾಡಿದರು
ಬೀದರ್‌ನಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಸೂಕ್ಷ್ಮ ವೀಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಚುನಾವಣಾ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಗೌತಮ ಅರಳಿ ಮಾತನಾಡಿದರು   

ಬೀದರ್: ಚುನಾವಣೆ ಸೂಕ್ಷ್ಮ ವೀಕ್ಷಕರು ಜಾಗರೂಕತೆಯಿಂದ ಕೆಲಸ ಮಾಡಬೇಕು. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ರಾಮಚಂದ್ರನ್ ಆರ್ ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಚುನಾವಣೆಯ ಜಿಲ್ಲೆಯ 225 ಸೂಕ್ಷ್ಮ ವೀಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚುನಾವಣಾ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ. ಗೌತಮ ಅರಳಿ ಮಾತನಾಡಿ, ವೀಕ್ಷಕರು ಮತದಾನ ದಿನ ಮತಗಟ್ಟೆಯಲ್ಲಿ ಕುಳಿತು ಪ್ರತಿಯೊಂದನ್ನೂ ಸೂಕ್ಷ್ಮವಾಗಿ ಗಮನಿಸಬೇಕು ಎಂದು ತಿಳಿಸಿದರು.

ADVERTISEMENT

ಮತಗಟ್ಟೆಯಲ್ಲಿ ವಿಡಿಯೋಗ್ರಫಿ ಕಡ್ಡಾಯವಾಗಿ ಆಗುತ್ತಿದೆಯೇ, ಮತದಾನಕ್ಕೆ ಬರುವವರು ಮತದಾನ ಗೌಪ್ಯತೆ ಕಾಯ್ದುಕೊಳ್ಳುತ್ತಿದ್ದಾರೆಯೇ ಇತ್ಯಾದಿ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಚುನಾವಣಾ ವೀಕ್ಷಕಿ ಕಾವೇರಿ ಡಿ.ಬಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಚುನಾವಣಾ ಶಾಖೆಯ ಸತ್ಯದೀಪ ಮನಗೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.