ADVERTISEMENT

ಜೆಡಿಎಸ್‌ ಅಭ್ಯರ್ಥಿ ಗೆಲ್ಲಿಸಿ: ಕಾರ್ಯಕರ್ತರಿಗೆ ಬಂಡೆಪ್ಪ ಕಾಶೆಂಪೂರ ಮನವಿ

ಬಂಡೆಪ್ಪ ಕಾಶೆಂಪೂರ ಕಾರ್ಯಕರ್ತರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 15:06 IST
Last Updated 2 ಏಪ್ರಿಲ್ 2021, 15:06 IST
ಬೀದರ್‌ನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿದರು
ಬೀದರ್‌ನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಶಾಸಕ ಬಂಡೆಪ್ಪ ಕಾಶೆಂಪೂರ ಮಾತನಾಡಿದರು   

ಬೀದರ್: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಶಾಸಕ ಬಂಡೆಪ್ಪ ಕಾಶೆಂಪೂರ ಮನವಿ ಮಾಡಿದರು.

ಓಲ್ಡ್‌ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆ ಸಮೀಪಿಸುತ್ತಿದೆ. ಪಕ್ಷದ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಪಾಲ್ಗೊಂಡು ಅಭ್ಯರ್ಥಿಗೆ ಬೆಂಬಲ ನೀಡಬೇಕು. ಮತದಾರರಿಗೆ ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಯೋಜನೆಗಳ ಮನವರಿಕೆ ಮಾಡಬೇಕು ಎಂದು ತಿಳಿಸಿದರು

ADVERTISEMENT

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಾಪೂರ, ತಾಲ್ಲೂಕು ಘಟಕದ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.