ADVERTISEMENT

ಕೃಷಿ ಉತ್ಪನ್ನ ಮೌಲ್ಯವರ್ಧನೆ: ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 5 ಜನವರಿ 2020, 10:23 IST
Last Updated 5 ಜನವರಿ 2020, 10:23 IST
ಬೀದರ್ ತಾಲ್ಲೂಕಿನ ಮಾಳೆಗಾಂವ ಗ್ರಾಮದಲ್ಲಿ ಆಯೋಜಿಸಿದ್ದ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತ ಕಾರ್ಯಾಗಾರವನ್ನು ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶಿವಶರಣಪ್ಪ ಮಜಗೆ ಉದ್ಘಾಟಿಸಿದರು
ಬೀದರ್ ತಾಲ್ಲೂಕಿನ ಮಾಳೆಗಾಂವ ಗ್ರಾಮದಲ್ಲಿ ಆಯೋಜಿಸಿದ್ದ ಕೃಷಿ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತ ಕಾರ್ಯಾಗಾರವನ್ನು ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶಿವಶರಣಪ್ಪ ಮಜಗೆ ಉದ್ಘಾಟಿಸಿದರು   

ಜನವಾಡ: ಕೃಷಿ ಉದ್ಯೋಗ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತ ಕಾರ್ಯಾಗಾರ ಬೀದರ್ ತಾಲ್ಲೂಕಿನ ಮಾಳೆಗಾಂವ ಗ್ರಾಮದ ಭವಾನಿ ದೇವಸ್ಥಾನದಲ್ಲಿ ನಡೆಯಿತು.

‘ರೈತರು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮೂಲಕ ಅಧಿಕ ಆದಾಯ ಪಡೆಯಬಹುದು. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಇಲ್ಲದಿದ್ದಾಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಇರಿಸಿ, ಮುಂಗಡ ಸಾಲ ಪಡೆಯಬಹುದು. ಯೋಗ್ಯ ಬೆಲೆ ದೊರಕಿದಾಗ ಮಾರಾಟ ಮಾಡಬಹುದು’ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ ಪಾಟೀಲ ಹೇಳಿದರು.

ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಶಿವಶರಣಪ್ಪ ಮಜಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಪಾಪಣ್ಣ, ಅಮಿನಾಬಿ, ಮಹಾಂತೇಶ, ರಘುನಾಥ, ಸುಜಾತಾ, ಸಂಪತ, ಬಕ್ಕಪ್ಪ ಭದ್ರಪ್ಪ, ಶಿವಕುಮಾರ ಇದ್ದರು.

ADVERTISEMENT

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ ಆಶ್ರಯದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.