ADVERTISEMENT

ಕನ್ನಡ ಭವನದ ಕಾಮಗಾರಿ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 16:41 IST
Last Updated 11 ಜುಲೈ 2021, 16:41 IST
ಬೀದರ್‌ನ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಳವಂತರಾವ್ ಪಾಟೀಲ ವೀಕ್ಷಿಸಿದರು
ಬೀದರ್‌ನ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನ ಕಾಮಗಾರಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಳವಂತರಾವ್ ಪಾಟೀಲ ವೀಕ್ಷಿಸಿದರು   

ಬೀದರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಳವಂತರಾವ್ ಪಾಟೀಲ ಅವರು, ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.

ಕಾಮಗಾರಿ ವೀಕ್ಷಣೆ ಮಾಡಿದ ಅವರು, ಭವನದ ಅಂದಾಜು ವೆಚ್ಚ ₹8 ಕೋಟಿ ಆಗಿದೆ. ಇದರಲ್ಲಿ
₹2 ಕೋಟಿ ಮಂಜೂರಾಗಿದ್ದು, ₹1 ಕೋಟಿ ಬಿಡುಗಡೆಯಾಗಿದೆ. ಉಳಿದ ಅನುದಾನ ಬಿಡುಗಡೆಗೂ ನೆರವು ನೀಡಲಾಗುವುದು ಎಂದು ತಿಳಿಸಿದರು.

ಗ್ರಂಥಾಲಯ, ಕಲಾ ಗ್ಯಾಲರಿ, ರಂಗ ತಾಲೀಮು, ಬಯಲು ರಂಗಮಂದಿರ ಒಳಗೊಂಡಂತೆ ನಿರ್ಮಾಣವಾಗುತ್ತಿರುವ ಭವನವು ಮಾದರಿ ಭವನವಾಗಲಿದೆ ಎಂದು ಹೇಳಿದರು.

ADVERTISEMENT

ಕನ್ನಡ ಭವನದ ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ. ಎರಡು ತಿಂಗಳಲ್ಲಿ ಮೊದಲ ಹಂತದ ಕಟ್ಟಡ ಪೂರ್ಣಗೊಳ್ಳಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಜಾನಪದ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ.ಬಸವರಾಜ ಬಲ್ಲೂರ, ಕೋಶಾಧ್ಯಕ್ಷ ಟಿ.ಎಂ ಮಚ್ಚೆ, ಮಹಿಳಾ ಪ್ರತಿನಿಧಿ ಕಸ್ತೂರಿ ಪಟಪಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಮನೋಹರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.