ಬೀದರ್: ಭಾರತದ ಸಂವಿಧಾನವು ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾಗಿದೆ ಎಂದು ವಕೀಲ ಗುರುನಾಥ ರಾಜಗೀರಾ ಹೇಳಿದರು.
ಇಲ್ಲಿಯ ಕರ್ನಾಟಕ ಪದವಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದ ಸಂವಿಧಾನವನ್ನು ಬೇರೆ ಬೇರೆ ಕಡೆಗಳಿಂದ ಪಡೆದ ಅಂಶಗಳ ಚೀಲ ಎಂದು ಕರೆಯಲಾಗುತ್ತದೆ. ಸಂವಿಧಾನದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಪರಿಕಲ್ಪನೆ ಫ್ರಾನ್ಸ್, ರಾಜ್ಯ ನಿರ್ದೇಶಕ ತತ್ವಗಳು ಐರ್ಲೆಂಡ್ ಸಂವಿಧಾನದ ಕೊಡುಗೆಗಳಾಗಿವೆ ಎಂದು ನುಡಿದರು.
ಪ್ರತಿ ವಿದ್ಯಾರ್ಥಿಯೂ ಸಂವಿಧಾನದ ಬಗ್ಗೆ ಅರಿಯಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ಎಸ್. ಚಲವಾ ಹೇಳಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಸಚಿನ್ ವಿಶ್ವಕರ್ಮ ಪ್ರಾಸ್ತಾವಿಕವಾಗಿ ಮತನಾಡಿದರು. ಉಪನ್ಯಾಸಕರಾದ ಡಾ. ದಿಲೀಪಕುಮಾರ, ಲಕ್ಷ್ಮಿ ಕುಂಬಾರ, ಪರಮೇಶ್ವರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.