ಬೀದರ್: ಔರಾದ್ ತಾಲ್ಲೂಕಿನ ಸಾವರಗಾಂವ್ ಗ್ರಾಮದ ಪರಿಶಿಷ್ಟರ ಬಡಾವಣೆಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಕಂಬಗಳ ಅಳವಡಿಕೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನವೆಂಬರ್ 11ರಂದು ವಿಚಾರಣೆಗೆ ಬರಲಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ತಿಳಿಸಿದ್ದಾರೆ.
ವಿದ್ಯುತ್ ಕಂಬಗಳು ಇಲ್ಲದ ಕಾರಣಕ್ಕಾಗಿ ಬಡಜನರಿಗೆ ವಿದ್ಯುತ್ ಸಂಪರ್ಕ ಪಡೆಯುವುದು ಕಷ್ಟವಾಗುತ್ತಿದೆ. ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕ ಹಿತಾಸಕ್ತಿ ಅಡಿ ವಿಚಾರಣೆ ನಡೆಸಿ, ಸರ್ಕಾರಕ್ಕೆ ವಿದ್ಯುತ್ ಕಂಬಗಳನ್ನು ಅಳವಡಿಸಲು ನಿರ್ದೇಶನ ನೀಡಬೇಕೆಂದು ಕೋರಲಾಗಿದೆ. ಅದರ ವಿಚಾರಣೆ ನ. 11ರಂದು ನಡೆಯಲಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಮುಖ್ಯ ಎಂಜಿನಿಯರ್, ಕಲಬುರಗಿ ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್, ಬೀದರ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಔರಾದ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನು ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.