ADVERTISEMENT

ಮಾಜಿ ಶಾಸಕ ಮಹಮ್ಮದ್ ಲೈಕೊದ್ದಿನ್

​ಪ್ರಜಾವಾಣಿ ವಾರ್ತೆ
Published 1 ಮೇ 2021, 6:30 IST
Last Updated 1 ಮೇ 2021, 6:30 IST
ಮಹಮ್ಮದ್ ಲೈಕೊದ್ದಿನ್
ಮಹಮ್ಮದ್ ಲೈಕೊದ್ದಿನ್   

ಬೀದರ್: ಮಾಜಿ ಶಾಸಕ ಮಹಮ್ಮದ್ ಲೈಕೊದ್ದಿನ್ (85) ಶುಕ್ರವಾರ ಇಲ್ಲಿ ನಿಧನರಾದರು.

ಬೀದರ್ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಮೂರು ಬಾರಿ ಸ್ಪರ್ಧಿಸಿದ್ದ ಅವರು, ಒಮ್ಮೆ ಗೆಲುವು ಸಾಧಿಸಿದ್ದರು. ‌ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ನಾಲ್ಕು ದಿನಗಳ ಹಿಂದಷ್ಟೇ ಅವರ ಪತ್ನಿ ನಿಧನರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ನಗರದಲ್ಲಿ ಅಂತ್ಯಕ್ರಿಯೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT