ADVERTISEMENT

ಬೀದರ್:ಪಶು ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಯಲಗೊಡ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 7:54 IST
Last Updated 5 ಫೆಬ್ರುವರಿ 2023, 7:54 IST
ಡಾ. ಶಿವಶರಣಪ್ಪ ಯಲಗೊಡ
ಡಾ. ಶಿವಶರಣಪ್ಪ ಯಲಗೊಡ   

ಬೀದರ್: ಹುಮನಾಬಾದ್‍ನ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಶಿವಶರಣಪ್ಪ ಯಲಗೊಡ ಅವರು ಕರ್ನಾಟಕ ಪಶು ವೈದ್ಯಕೀಯ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅವರು ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಯಲಗೊಡ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಿಂದೆ ಎರಡು ಬಾರಿ ಪ್ರಧಾನ ಕಾರ್ಯದರ್ಶಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

* * *

ಸಾಲ ವಿತರಣೆ: ನಿಯಮ ಪಾಲಿಸಿ

ADVERTISEMENT

ಬೀದರ್: ಸಹಕಾರ ಸಂಘಗಳು ಸಾಲ ವಿತರಣೆ ವೇಳೆ ತಪ್ಪದೆ ನಿಯಮಗಳನ್ನು ಪಾಲಿಸಬೇಕು ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಪವನ್ ರಾಠೋಡ್ ಹೇಳಿದರು.

ಇಲ್ಲಿಯ ಗಾಂಧಿಗಂಜ್‍ನ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆಯೋಜಿಸಿದ್ದ ವಿಶೇಷ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಉದ್ಘಾಟಿಸಿದರು. ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಪರಮೇಶ್ವರ ಮುಗಟೆ, ನಿರ್ದೇಶಕ ಗುಂಡಪ್ಪ ಹಣಮಂತಪ್ಪ, ಸಂತೋಷಕುಮಾರ ಪೋಲಕಪಳ್ಳಿ, ಲಿಯಾಕತ್ ಅಲಿ, ಡಾ. ನಾಗೇಶ ಪಾಟೀಲ ಮಾತನಾಡಿದರು.

ಜಿಲ್ಲಾ ಸಹಕಾರ ಯುನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಆರ್. ಮಲ್ಲಮ್ಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.