ADVERTISEMENT

ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2019, 9:52 IST
Last Updated 26 ಡಿಸೆಂಬರ್ 2019, 9:52 IST
ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಎಳ್ಳ ಅಮವಾಸ್ಯೆ ಪ್ರಯುಕ್ತ ಹೊಲವೊಂದರಲ್ಲಿ ಬಂಧುಗಳು, ಸ್ನೇಹಿತರೊಂದಿಗೆ ಸಾಮೂಹಿಕ ಭೋಜನ ಮಾಡಿದ ಜನರು
ಬೀದರ್ ತಾಲ್ಲೂಕಿನ ಬಾವಗಿ ಗ್ರಾಮದಲ್ಲಿ ಎಳ್ಳ ಅಮವಾಸ್ಯೆ ಪ್ರಯುಕ್ತ ಹೊಲವೊಂದರಲ್ಲಿ ಬಂಧುಗಳು, ಸ್ನೇಹಿತರೊಂದಿಗೆ ಸಾಮೂಹಿಕ ಭೋಜನ ಮಾಡಿದ ಜನರು   

ಜನವಾಡ: ಎಳ್ಳ ಅಮವಾಸ್ಯೆಯನ್ನು ಬೀದರ್ ತಾಲ್ಲೂಕಿನಾದ್ಯಂತ ಬುಧವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಜನವಾಡ, ಮರಕಲ್, ಅಲಿಯಂಬರ್, ಮಾಳೆಗಾಂವ, ಚಿಮಕೋಡ, ಚಿಲ್ಲರ್ಗಿ, ಕಮಠಾಣ, ಬಗದಲ್, ಮನ್ನಳ್ಳಿ, ಆಣದೂರ, ಬಾವಗಿ ಸೇರಿದಂತೆ ವಿವಿಧೆಡೆ ರೈತರು ರೊಟ್ಟಿಯ ಗಂಟು ಕಟ್ಟಿಕೊಂಡು ಹೊಲಗಳಿಗೆ ತೆರಳಿ ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಚರಗ ಚೆಲ್ಲಿ ಎಳ್ಳ ಅಮಾವಾಸ್ಯೆಯನ್ನು ಆಚರಿಸಿದರು.

ರೈತರು ಬಂಧುಗಳು ಹಾಗೂ ಸ್ನೇಹಿತರನ್ನು ತಮ್ಮ ಹೊಲಕ್ಕೆ ಊಟಕ್ಕೆ ಆಹ್ವಾನಿಸಿದರು. ಭಜ್ಜಿ, ಜೋಳದ ರೊಟ್ಟಿ, ಸಜ್ಜೆ ರೊಟ್ಟಿ, ಜೋಳದ ಅನ್ನ, ಶೇಂಗಾ ಚಟ್ನಿ, ಕರ್ಚಿಕಾಯಿ, ಅಂಬಲಿ ಮೊದಲಾದ ಖಾದ್ಯಗಳನ್ನು ಉಣಬಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.