ಜನವಾಡ: ಅಂತರರಾಷ್ಟ್ರೀಯ ಯೋಗ ದಿನವನ್ನು ಬೀದರ್ ತಾಲ್ಲೂಕಿನ ವಿವಿಧೆಡೆ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಬಗದಲ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯೊಂದಿಗೆ ಯೋಗಾಭ್ಯಾಸ ಮಾಡಿದರು.
ಯೋಗ ಮಾಡುವುದರಿಂದ ರೋಗಗಳಿಂದ ಮುಕ್ತಿ ಪಡೆಯಬಹುದು. ಹೀಗಾಗಿ ಎಲ್ಲರೂ ನಿತ್ಯ ಯೋಗ ಮಾಡಬೇಕು ಎಂದು ಸಲಹೆ ಮಾಡಿದರು. ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಶೂ ವಿತರಿಸಿದರು.
ಪ್ರಾಚಾರ್ಯ ಚನ್ನಬಸವ ಹೇಡೆ, ಪ್ರಮುಖರಾದ ಗುರುನಾಥ ರಾಜಗೀರಾ, ರಾಜರೆಡ್ಡಿ ಶಹಾಬಾದ್, ಹಣಮಂತರಾವ್ ಮೈಲಾರೆ, ಜಗನ್ನಾಥ ಜಮಾದಾರ್, ಕುಶಾಲ್ ಯಾಬಾ, ಘಾಳೆಪ್ಪ ಚಟ್ನಳ್ಳಿ, ಸಂಜುಕುಮಾರ ಕೋಳಿ ಇದ್ದರು.
ಲಿಂಗರಾಜ ಅಪ್ಪ ಕಾಲೇಜು: ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಸಾಮೂಹಿಕ ಯೋಗಾಭ್ಯಾಸ ಮಾಡಿದರು. ಪತಂಜಲಿ ಯೋಗ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಂದ್ರ ಯದಲಾಪುರೆ ಯೋಗದ ಪ್ರಕಾರಗಳನ್ನು ಹೇಳಿಕೊಟ್ಟರು. ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ, ಮೇರಾ ಯುವ ಭಾರತ ಜಿಲ್ಲಾ ಅಧಿಕಾರಿ ಮಯೂರಕುಮಾರ ಗೋರಮೆ, ಪಾಪನಾಶ ದೇವಸ್ಥಾನದ ಸದಸ್ಯ ಮಹೇಶ ಪಾಟೀಲ, ಪ್ರಾಚಾರ್ಯೆ ವಿನಿತಾ ಪಾಟೀಲ, ಪದವಿಪೂರ್ವ ಕಾಲೇಜು ಪ್ರಾಚಾರ್ಯ ಸತೀಶ್ ಪಾಟೀಲ, ಪ್ರೊ. ವಿಜಯಾನಂದ ಕಪ್ಟೆ, ಬಸವಲಿಂಗ ಸ್ವಾಮಿ ಇದ್ದರು.
ಪಶು ವೈದ್ಯಕೀಯ ಕಾಲೇಜು: ಕಮಠಾಣ ಸಮೀಪದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಂದ್ರ ಯದಲಾಪುರೆ ಅವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಯೋಗಾಭ್ಯಾಸ ಮಾಡಿಸಿದರು.
ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಬಸವರಾಜ ಭತಮುರ್ಗೆ ಉದ್ಘಾಟಿಸಿದರು. ಗಾಯಕಿ ಶಿವಾನಿ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಕಾಲೇಜು ಪ್ರಭಾರ ಡೀನ್ ಡಾ. ವಿವೇಕ್ ಕಸರಳ್ಳಿಕರ್, ಡಾ. ಪೃಥ್ವಿರಾಜ್, ಡಾ. ಮಂಜುನಾಥ ಪಾಟೀಲ, ಡಾ. ಮಲ್ಲಿನಾಥ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.