ADVERTISEMENT

‘ಯುವಜನತೆ ದೇಶದ ಆಸ್ತಿ’

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 12:32 IST
Last Updated 20 ಜೂನ್ 2021, 12:32 IST
ಬೀದರ್‌ನಲ್ಲಿ ಜೈಹಿಂದ ಹಿರಿಯ ನಾಗರಿಕರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ.ಎ.ಎಸ್. ಪಾಟೀಲ ಅವರನ್ನು ಸನ್ಮಾನಿಸಲಾಯಿತು
ಬೀದರ್‌ನಲ್ಲಿ ಜೈಹಿಂದ ಹಿರಿಯ ನಾಗರಿಕರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ.ಎ.ಎಸ್. ಪಾಟೀಲ ಅವರನ್ನು ಸನ್ಮಾನಿಸಲಾಯಿತು   

ಬೀದರ್: ‘ಯುವಜನತೆ ದೇಶದ ಆಸ್ತಿ. ದುಶ್ಚಟಗಳಿಂದ ದೂರವಿರುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಕಲಬುರ್ಗಿಯ ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ.ಎ.ಎಸ್. ಪಾಟೀಲ ಹೇಳಿದರು.

ಜೈಹಿಂದ ಹಿರಿಯ ನಾಗರಿಕರ ಸಂಘದ ವತಿಯಿಂದ ಗುರುನಾನಕ್ ಕಾಲೊನಿಯಲ್ಲಿರುವ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ‘ಯುವ ಶಕ್ತಿ, ದೇಶದ ಶಕ್ತಿ’ ಕುರಿತು ನಡೆದ ಸಂವಾದದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಂಸ್ಥೆಯ ಕಾರ್ಯದರ್ಶಿ ವೀರಭದ್ರಪ್ಪ ಉಪ್ಪಿನ್ ಮಾತನಾಡಿ, ‘ಕೋವಿಡ್ ತೊಲಗಿದ ನಂತರ ಸಂಘದ ವತಿಯಿಂದ
ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

ಉದ್ಯಮಿ ರಾಮಕೃಷ್ಣ ಮುನಿಗ್ಯಾಲ ಅಧ್ಯಕ್ಷತೆ ವಹಿಸಿದ್ದರು. ಶಂಕರ್ ಚಿದ್ರಿ, ಧನರಾಜ್, ಶಿವಕುಮಾರ, ಲಲಿತಾಬಾಯಿ ಮುನಿಗ್ಯಾಲ, ವಿಜಯಲಕ್ಷ್ಮೀ ಸಾವಳೆ, ಶಿಮರಾನ್ ಇದ್ದರು. ಕೋಶಾಧ್ಯಕ್ಷ ಗಂಗಪ್ಪ ಸಾವಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.